Saturday, October 10, 2026
Saturday, October 10, 2026

P. Nagaraj ಕ್ರೀಡೆಗಳಲ್ಲಿ ಪಟುಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸುವುದು ಮುಖ್ಯ- ಪಿ.ನಾಗಾರಾಜ್

Date:

P. Nagaraj ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವುದು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಹೇಳಿದರು.

ನಗರದ ಸೆಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದರೆ ತಮ್ಮಲ್ಲಿರುವ ಕ್ರೀಡಾ ಕೌಶಲ್ಯವನ್ನು ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸುವುದರಿಂದ ಕ್ರೀಡಾಪ್ರತಿಭೆ ಹೊರ ಹೊಮ್ಮುತ್ತದೆ ಎಂದು ಹೇಳಿದರು.

ಈಗಾಗಲೇ ಹಲವು ವಿಭಾಗ ಮಟ್ಟದಲ್ಲಿ ನೀವುಗಳು ಭಾಗವಹಿಸಿದ್ದೀರಿ ಜಿಲ್ಲೆ, ರಾಜ್ಯ, ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ದಿನಾಂಕ ನಿಗದಿಯಾಗಿದ್ದು, ಮುಂದಿನ ದಿನಗಳಲ್ಲಿ ನೀವುಗಳು ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಲಿ ಎಂದರು.

P. Nagaraj ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ನಿರಂಜನ್ ಮೂರ್ತಿ ಬಿ. ಹೆಚ್. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಾಳನಾಯ್ಕ್, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ,ಕಾರ್ಯದರ್ಶಿಗಳಾದ ನಾಗರಾಜ, ಮಹೇಶ್ ಹುಲ್ಲತ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...