Wednesday, December 17, 2025
Wednesday, December 17, 2025

JCI Shivamogga ರಕ್ತದಾನದ ಬಗ್ಗೆ ಯಾವುದೇ ಭಯಬೇಡ-ಪೂರ್ಣಿಮಾ ಸುನೀಲ್

Date:

JCI Shivamogga ಆರೋಗ್ಯವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ರಕ್ತದಾನವು ಜೀವ ಉಳಿಸುವ ಪುಣ್ಯದ ಕಾರ್ಯ ಆಗಿದ್ದು, ರಕ್ತದಾನದ ಬಗ್ಗೆ ಯಾವುದೇ ಭಯ ಬೇಡ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಎದುರಿನಲ್ಲಿರುವ ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಆವರಣದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘ, ಸಂಜೀವಿನಿ ಬ್ಲಡ್ ಬ್ಯಾಂಕ್ ಹಾಗೂ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ, ನೇತ್ರದಾನ ಶಿಬಿರ ಹಾಗೂ ದೇಹದಾನ ಶಿಬಿರದಲ್ಲಿ ಮಾತನಾಡಿದರು.

ಸದೃಢ ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನವು ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಅರ್ಹ ಇರುವ ಎಲ್ಲರೂ ಕಾಲ ಕಾಲಕ್ಕೆ ರಕ್ತದಾನ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ಕಾಯಕಕ್ಕೆ ನೀವು ಮಾಡುವ ರಕ್ತದಾನ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಕ್ತದಾನ, ನೇತ್ರದಾನ ಹಾಗೂ ದೇಹದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಜಾಗೃತಿ ಹೊಂದಬೇಕು. ಸೇವಾ ಚಟುವಟಿಕೆಗಳು ಯಶಸ್ವಿ ಆಗಲು ಎಲ್ಲರ ಸಹಕಾರ ಮುಖ್ಯ ಎಂದರು. 200ಕ್ಕೂ ಅಧಿಕ ಜನರು ಭಾಗವಹಿಸಿ ರಕ್ತದಾನ ಮಾಡಿದರು. ಇಬ್ಬರು ದೇಹದಾನ ಹಾಗೂ ಅನೇಕರು ನೇತ್ರದಾನದ ಕಾರ್ಯದಲ್ಲಿ ಭಾಗಿಯಾದರು.

JCI Shivamogga ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಕಾರ್ಯಕ್ರಮ ಸಂಚಾಲಕ ಪ್ರದೀಪ್ ಶಂಕರ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ. ವಿಶ್ವಾಸ್, ಸಂಜೀವಿನಿ ಬ್ಲಡ್ ಬ್ಯಾಂಕ್‌ನ ದಿನಕರ್, ಶಿವಮೊಗ್ಗ ವೈದ್ಯಕೀಯ ಮಹಾ ವಿದ್ಯಾಲಯದ ಡಾ. ರೇಖಾ, ಟ್ಯಾಕ್ಸಿ ಚಾಲಕರ ಸಂಘದ ಬಿ.ಡಿ.ಗಣೇಶ್, ರಾಘವೇಂದ್ರ, ಸುಧೀರ್ ಮಲ್ಯ, ಅರುಣ್ ಕುಮಾರ್, ಜೆಸಿಐ ಭಾವನಾ ಪದಾಧಿಕಾರಿಗಳು, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...