Friday, November 22, 2024
Friday, November 22, 2024

Madhu Bangarappa ಹಿಂದೂ- ಮುಸ್ಲಿಂ ಬಾಂಧವರ ಹಬ್ಬಗಳು ಶಾಂತಿ & ಸುಗಮವಾಗಿ ನಡೆಯಲಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಪ್ರಸಕ್ತ ಮಾಹೆಯಲ್ಲಿ ಹಿಂದೂ-ಮುಸ್ಲಿo ಬಾಂಧವರು ಆಚರಿಸಲಿರುವ ಹಬ್ಬಗಳನ್ನು ಯಾವುದೇ ಅಡಚಣೆ, ಅತಂಕಗಳಿಲ್ಲದೆ ಶಾಂತಿಯುತವಾಗಿ ಆಚರಿಸುವ ವಿಶ್ವಾಸ ತಮಗಿರುವುದಾಗಿ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿವಮೊಗ್ಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಉಭಯ ಧರ್ಮಗಳ ಬಾಂಧವರು ಆಚರಿಸುವ ಹಬ್ಬದಿಂದ ರಾಜ್ಯಕ್ಕೆ ಉತ್ತಮ ಸಂದೇಶ ರವಾನೆಯಾಗಲಿದೆ ಎಂದವರು ನುಡಿದರು.

ಎಲ್ಲಾ ಧರ್ಮದವರು ತಮ್ಮ ಹಬ್ಬಗಳನ್ನು ಸಂಭ್ರಮ ಸಡಗರಗಳಿಂದ ಆಚರಿಸಬೇಕು. ಅಂತೆಯೇ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕೈಗೊಳ್ಳುವ ತೀರ್ಮಾನಗಳಿಗೆ ಪೂರಕವಾಗಿ ಸಹಕರಿಸುವಂತೆ ಮನವಿ ಮಾಡಿದ ಅವರು, ಜಿಲ್ಲಾಡಳಿತ, ಪೊಲೀಸ್ ಇಲಾಖೆಯು ತಮ್ಮ ನೆಮ್ಮದಿಯ ಬದುಕಿಗೆ ಸದಾ ಜೊತೆಗಿರಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಸದಾ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಈ ಸಂಬoಧ ಉಭಯ ಧರ್ಮಗಳ ಮುಖಂಡರೊoದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ ಎಂದರು.

ಪ್ರಸ್ತುತ ಸಾಲಿನಲ್ಲಿ ಬಂದಿರುವ ಹಬ್ಬಗಳು ನಮ್ಮ ನಮ್ಮಲ್ಲಿನ ಸ್ನೇಹ-ಸೌಹಾರ್ಧತೆಯನ್ನು ಸಾಬೀತುಪಡಿಸಿಕೊಳ್ಳಲು ಇರುವ ಸದವಕಾಶ ಇದಾಗಿದೆ ಎಂದ ಅವರು, ವೈಭವಕ್ಕೆ ಧಕ್ಕೆ ಬಾರದಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಸಭೆ-ಸಮಾರಂಭಗಳು ಶಾಂತಿಯುತವಾಗಿ ನಡೆಯುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕ್ಷುಲ್ಲಕ ಕಾರಣಗಳಿಗಾಗಿ ಅಹಿತಕರ ಘಟನೆಗಳು ಸಂಭವಿಸದoತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್-ಭಂಟಿoಗ್‌ಗಳ ಅಳವಡಿಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ ಮುಂದಿನ ಎರಡು ವರ್ಷಗಳಿಗೂ ಮುಂದುವರೆಯಲಿದೆ ಎಂದವರು ನುಡಿದರು.

ನಡೆಯುವ ಸಭೆ-ಸಮಾರಂಭ-ಮೆರವಣಿಗೆಗಳ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಲು ವಿದ್ಯುತ್, ಪೊಲೀಸ್, ಕಂದಾಯ, ಸ್ಥಳೀಯ ಸಂಸ್ಥೆಗಳು ಹಾಗೂ ತಹಶೀಲ್ದಾರರನ್ನೊಳಗೊಂಡ ಏಕಗವಾಕ್ಷಿ ಪದ್ದತಿಯನ್ನು ಅನುಷ್ಠಾನಕ್ಕೆ ತರಲಾಗಿದೆ.

ಆಸಕ್ತರು ತಮ್ಮ ಕಾರ್ಯಕ್ರಮಗಳಿಗಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.

Madhu Bangarappa ಜಿಲ್ಲೆಯ ಎಲ್ಲಾ ತಾಲೂಕು ಹೋಬಳಿ ಕೇಂದ್ರಗಳು ಸೇರಿದಂತೆ ಅಗತ್ಯವಿರುವಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇನ್ನೂ ಕ್ಯಾಮರಾಗಳನ್ನು ಅಳವಡಿಸುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ವಿಡಿಯೋ, ಫೋಟೋಗ್ರಫಿ ಮತ್ತು ಡ್ರೋಣ್ ಮೂಲಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳ ಚಿತ್ರೀಕರಣ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ಶಾಂತಿಭoಗ ಮಾಡುವವರ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಸಮಾಜ ಕಂಟಕರಿಗೆ ಕ್ರಮ ಅನಿವಾರ್ಯವಾಗಲಿದೆ. ಅಂತೆಯೇ ಸಾರ್ವಜನಿಕರ ರಕ್ಷಣೆಯೂ ಪರಮಗುರಿಯಾಗಿದೆ ಎಂದ ಅವರು, ಉಭಯ ಧರ್ಮಗಳ ಪ್ರಮುಖರು ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಉತ್ತಮ. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಕೂಡ ಉತ್ತಮ ವಿಧಾನವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಿಂದೂ ಮುಸ್ಲಿಂ ಮುಖಂಡರುಗಳು ಜಿಲ್ಲಾಡಳಿತಕ್ಕೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸಂಘ-ಸoಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...

M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್

M.B.Patil 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ...