Friday, December 5, 2025
Friday, December 5, 2025

Jci Shimoga Sahyadri ತಂಬಾಕು ಸೇವನೆಯಿಂದ ಪ್ರತಿವರ್ಷ 10 ಲಕ್ಷ ಜನ ಮರಣ-ಹೇಮಂತ್ ರಾಜ್ ಅರಸ್

Date:

Jci Shimoga Sahyadri ಶಿವಮೊಗ್ಗ ತಂಬಾಕು ಸೇವನೆಯಿಂದ ಪ್ರತಿ ವರ್ಷ 10 ಲಕ್ಷ ಜನರು ಸಾವನ್ನಪ್ಪುತ್ತಿದ್ದು, ಮಾದಕ ವಸ್ತುಗಳ ವ್ಯಸನದಿಂದ ದೂರ ಇರಬೇಕು ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್ ಹೇಳಿದರು.

ಶಿವಮೊಗ್ಗ ನಗರದ ಜ್ಞಾನಗಂಗೋತ್ರಿ ಪದವಿಪೂರ್ವ ಕಾಲೇಜಿನಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ “ ತಂಬಾಕು ಹಾಗೂ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು” ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕೆಲವರು ತಂಬಾಕು, ಮಾದಕ ವಸ್ತುಗಳನ್ನು ತಿನ್ನುವ ಮೂಲಕ ದುಶ್ಚಟಗಳಿಗೆ ದಾಸರಾಗಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ತಂಬಾಕು, ಮಾದಕ ವಸ್ತುಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುವ ಜತೆಯಲ್ಲಿ ಜೀವಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.

ಯುವಜನರು ಮಾದಕ ವ್ಯಸನಿಗಳಾಗುವುದರಿಂದ ನರ ಮಂಡಲ ವ್ಯವಸ್ಥೆ ಮೇಲೆ ಪರಿಣಾಮ ಬೀರಿ ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ. ನೆನಪಿನ ಶಕ್ತಿ ಕಳೆದುಕೊಳ್ಳುತ್ತಾರೆ. ವಿದ್ಯಾರ್ಥಿಗಳು ಮಾದಕ ವ್ಯಸನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಪಾ ಹಿರೇಮಠ್ ಮಾತನಾಡಿ, ಜೆಸಿಐ ಸಪ್ತಾಹದ ಪ್ರಯುಕ್ತ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಜೀವನದಲ್ಲಿ ದುಶ್ಚಟಗಳಿಂದ ದೂರ ಇರಬೇಕು. ಯಾವುದೇ ಕೆಟ್ಟ ಅಭ್ಯಾಸಗಳನ್ನು ಕಲಿಯಬಾರದು ಎಂದು ಹೇಳಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ. ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗಬಾರದು ಎಂದು ತಿಳಿಸಿದರು.

Jci Shimoga Sahyadri ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತ ಸಲಹೆ, ಆಪ್ತ ಸಮಾಲೋಚನೆ ಚಿಕಿತ್ಸೆ ದೊರೆಯುತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜೆಸಿಐ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...