Breaking News
ಸರ್ಕಾರದ ಆದೇಶದ ಸಂಖ್ಯೆ ಕಂ. ಇ. 449 ಟಿ ಎನ್ ಆರ್ 2023, ಸೆಪ್ಟೆಂಬರ್ 13 ರ 2023ರ ಪ್ರಕಾರ ಕೇಂದ್ರ ಸರ್ಕಾರ ಬರ ನಿರ್ವಹಣಾ ಕೈಪಿಡಿ 2020 ರ ಘೋಷಣೆ ಮಾರ್ಗಸೂಚಿಯಂತೆ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿ ಅನುಸಾರವಾಗಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕಿನಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.
ಈ ಪೈಕಿ 161 ತಾಲೂಕುಗಳನ್ನ ತೀವ್ರ ಬರಪೀಡಿತ ತಾಲೂಕುಗಳು ( ಅನುಬಂಧ -1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು (ಅನುಬಂಧ -2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/ NDRF ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಕಂದಾಯ ಇಲಾಖೆಯ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.
Breaking News ಅನುಬಂಧ-1ರಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿವಮೊಗ್ಗ, ತಾಲೂಕುಗಳನ್ನ ಸೇರಿಸಿ, ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.