Siddaramaiah ಕಾವೇರಿ ನೀರು ನಿರ್ವಹಣಾ ಸಮಿತಿ ನಿನ್ನೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಎಲ್ಲ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆದಿದ್ದೆವು.
ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಗೈರಾಗಿದ್ದಾರೆ.
Siddaramaiah ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.