Health Center ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರ ನಿವಾಸಿಗಳಿಗೆ ವಾರ್ಡ್ ನಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸುವ ಮೂಲಕ ತುರ್ತು ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲ ಕಲ್ಪಿಸಿ ಕೊಡಬೇಕು ಎಂದು ನಗರಸಭಾ ಸದಸ್ಯರು ಆರೋಗ್ಯ ಸಚಿವ ದಿನೇಶ್‌ಗುಂಡುರಾವ್ ಅವರನ್ನು ಗುರುವಾರ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಉಪ್ಪಳ್ಳಿ ನಗರಸಭಾ ಸದಸ್ಯ ಮುನೀರ್ ಅಹ್ಮದ್ ನಗರದ ಉಪ್ಪಳ್ಳಿ, ಕಲ್ಲುದೊಡ್ಡಿ, ಶಾಂತಿನಗರ , ಇಂದಿರಾಗಾAಧಿ ಹಾಗೂ ರಾಜೀವ್‌ಗಾಂಧಿ ಬಡಾವಣೆಯಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು ಆರೋಗ್ಯ ಸಮಸ್ಯೆ ಎದುರಾದರೆ 5 ಕಿ.ಮೀ. ಸಂಚರಿಸಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಪ್ರಸ್ತುತ ಈ ಬಡಾವಣೆಗಳಲ್ಲಿ ಅತಿಹೆಚ್ಚು ಕೂಲಿಕಾರ್ಮಿಕರು, ಡೊಂಗ್ರಿ ಗೇರೇಷಿಯಾ ಹಾಗೂ ಹಕ್ಕಿಪಿಕ್ಕಿ ಜನಾಂಗ ಸೇರಿದಂತೆ ಮಧ್ಯಮ ವರ್ಗದವರೇ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ರೋಗರುಜಿನಿಗಳಿಗೆ ತುತ್ತಾಗುವ ಸಂದರ್ಭವಿರುವುದರಿoದ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಆ ನಿಟ್ಟಿನಲ್ಲಿ ಉಪ್ಪಳ್ಳಿ ವಾರ್ಡ್ಗಳಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಿದರೆ ಸ್ಥಳೀಯ ಹಾಗೂ ಸುತ್ತಮುತ್ತಲಿನ ನರಗನಹಳ್ಳಿ, ಬ್ಯಾಗದಹಳ್ಳಿ ಗ್ರಾಮಸ್ಥರಿಗೂ ಬಹಳಷ್ಟು ಅನುಕೂಲವಾಗುವ ಜೊತೆಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾಗಲು ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
Health Center ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತರ ಘಟಕದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನಯಾಜ್ ಅಹ್ಮದ್, ಚಿಕ್ಕಮಗಳೂರು ನಗರಸಭಾ ಸದಸ್ಯರಾದ ಖಜಂಧರ್ ಮೋನು, ಜಾವೀದ್, ಶಾದಂ ಅಲಂ, ಪರಮೇಶ್ ಮತ್ತಿತರರು ಹಾಜರಿದ್ದರು.