Thursday, September 17, 2026
Thursday, September 17, 2026

MP Sumalatha Ambareesh ಕಾವೇರಿ ನೀರು ಬಿಡುಗಡೆ:ರೈತರ ಸಮಸ್ಯೆ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಸಂಸದೆ ಸುಮಲತಾ ಅಂಬರೀಶ್

Date:

MP Sumalatha Ambareesh ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆ.

ಕೇವಲ ರೈತರ ಗದ್ದೆಗಳಿಗೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಈ ಎಲ್ಲ ಸಂಗತಿಗಳನ್ನು ದೆಹಲಿಯಲ್ಲಿ ಇಂದು ಜಲಶಕ್ತಿ ಸಚಿವರಾದ ಮಾನ್ಯ ಶ್ರೀ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಆಯಾ ರಾಜ್ಯಗಳ ಜಂಟಿ ಸಮಿತಿಯನ್ನು ರಚಿಸುವುದಾಗಿ ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ನಮ್ಮ ರೈತರ ಪರವಾಗಿ ನಿಂತುಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಭರವಸೆ ಈಡೇರುತ್ತದೆ ಎನ್ನುವ ವಿಶ್ವಾಸ ನನ್ನದು.

MP Sumalatha Ambareesh ರಾಜ್ಯ ಸರಕಾರ ಕೂಡ ಮಾನ್ಯ ಕೇಂದ್ರ ಸಚಿವರನ್ನು ಮತ್ತು ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ, ಭೀಕರವಾಗಿರುವ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿ. ತಮಿಳು ನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ನಾವೆಲ್ಲರೂ ನಮ್ಮ ರೈತರ ಪರವಾಗಿ ನಿಲ್ಲೋಣ ಎಂದು
ಮಂಡ್ಯ ಕ್ಷೇತ್ರದ ಸಂಸದೆ ಶ್ರೀಮತಿ‌ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...