Thursday, March 19, 2026
Thursday, March 19, 2026

CM Siddaramaiah ಕಾವೇರಿ ಸಮಸ್ಯೆ ಪ್ರಧಾನಿ‌ಮೋದಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ: ಸಿದ್ಧರಾಮಯ್ಯ ಸ್ವಾಗತ

Date:

CM Siddaramaiah ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ
ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

CM Siddaramaiah ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...