Cauvery Water Dispute ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ‘ಗಾಯದ ಮೇಲೆ ಬರೆ’ ಎಳೆದಂತೆ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು ಕರ್ನಾಟಕದ ಪಾಲಿಕೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ತಿಳಿಸಿದ್ದಾರೆ.
Cauvery Water Dispute ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಟ ಕಾಳಜಿಯೂ ತೋರದೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ, ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಹೇಳಿದ್ದಾರೆ.