M. B. Patil ರಾಜ್ಯದಲ್ಲಿ ಬಂಡವಾಳ ಹೂಡಿಕೆ ವೃದ್ಧಿಸುವ ಗುರಿಯೊಂದಿಗೆ ಕೈಗೊಂಡಿರುವ ಅಮೆರಿಕ ಪ್ರವಾಸವು ಯಶಸ್ವಿಯಾಗಿ ಸಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಆಟೋಮೋಟೀವ್ ತಂತ್ರಜ್ಞಾನ ಕ್ಷೇತ್ರದ ದೈತ್ಯ ಕಂಪನಿ ಆಪ್ಟೀವ್ Plc ಉನ್ನತಾಧಿಕಾರಿಗಳನ್ನು ನಮ್ಮ ನಿಯೋಗವು ಭೇಟಿ ಮಾಡಿತು. ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವಂತೆ ಆಹ್ವಾನ ನೀಡಿರುವೆ ಎಂದು ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್ ಅವರು ಹೇಳಿದ್ದಾರೆ.
ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಬಂಡವಾಳ ಹೂಡುವಂತೆ MKS ಇನ್ಸ್ಟ್ರುಮೆಂಟ್ಸ್ ಕಂಪನಿಯೊಂದಿಗೂ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.
M. B. Patil ವ್ಯಾಪಾರ ಸರಳೀಕರಣಗೊಳಿಸಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದ್ದು ಈ ನಿಟ್ಟನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಸಾಗಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.