Thursday, September 17, 2026
Thursday, September 17, 2026

Shimoga District Chamber of Commerce & Industry ಕರ್ನಾಟಕ ವಾಣಿಜ್ಯ&ಕೈಗಾರಿಕಾ ಮಹಾಸಂಸ್ಥೆಗೆ ಸದಸ್ಯರಾಗಿ ಡಿ.ಎಂ.ಶಂಕರಪ್ಪ ಆಯ್ಕೆ

Date:

Shimoga District Chamber of Commerce & Industry ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಡಿ.ಎಂ.ಶಂಕರಪ್ಪ ಅವರು ಸ್ಪರ್ಧಿಸಿ ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಸೇರಿ 4 ಜಿಲ್ಲೆಗಳ ಪರವಾಗಿ ಜಯಶೀಲರಾಗಿದ್ದು, 48 ಜನರ ಆಡಳಿತ ಸಮಿತಿಯಲ್ಲಿ ಡಿ.ಎಂ.ಶಂಕರಪ್ಪ ಅವರು ಒಬ್ಬರಾಗಿ ಆಯ್ಕೆಯಾಗಿರುತ್ತಾರೆ.

ಡಿ.ಎಂ.ಶಂಕರಪ್ಪ ಅವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರು, ಮಂಡಿ ಮರ್ಚೆಂಟ್ ಬ್ಯಾಂಕ್ ಮಾಜಿ ಅಧ್ಯಕ್ಷರು, ರೋಟರಿ ಚಾರಿಟೇಬಲ್ ಟ್ರಸ್ಟ್ ನ ಮಾಜಿ ಅಧ್ಯಕ್ಷರು, ಹಾಲಿ ಅಡಕೆ ಮಂಡಿ ವರ್ತಕರ ಸಂಘದ ಅಧ್ಯಕ್ಷರು, ಉದ್ಯಮಿಯೂ ಆಗಿದ್ದಾರೆ.

Shimoga District Chamber of Commerce & Industry ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಖಜಾಂಚಿ ಎಂ.ರಾಜು, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎಂಎಲ್‌ಸಿ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಗಣೇಶ್ ಅಂಗಡಿ, ರಾಕೇಶ್ ಗೌಡ ಎಫ್‌ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ, ಬಿ.ಎಲ್.ಶಂಕರಪ್ಪ, ರಾಮಕೃಷ್ಣ, ಪಿ.ಬಿ.ಶಿರೂರ್ ಅವರು ಡಿ.ಎಂ.ಶಂಕರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...