World Heart Day ಇಂದು ವಿಶ್ವ ಹೃದಯ ದಿನ. ಈ ದಿನವನ್ನು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು, ಆಹಾರ ಪದ್ಧತಿ, ಆರೋಗ್ಯಕರ ಜೀವನ ನಿರ್ವಹಣೆ ಸೇರಿದಂತೆ ಇನ್ನಿತರೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಈ ದಿನ ಅರಿವು ಮೂಡಿಸಲಾಗುತ್ತಿದೆ.
ಜಗತ್ತಿನಲ್ಲಿ 18 ಲಕ್ಷಕ್ಕೂ ಅಧಿಕ ಮಂದಿ ಪ್ರತಿವರ್ಷ ಹೃದಯ ಸಂಬಂಧೀ ಸಮಸ್ಯೆಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂಬುದು ಕಳವಳಕಾರಿ ಸಂಗತಿಯಾಗಿದೆ. ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.
ಈ ದಿನದಂದು ಅನೇಕ ರಾಜಕೀಯ ಗಣ್ಯರು ನಾಡಿನ ಜನರಿಗೆ ಹೃದಯ ಜಾಗೃತಿ ಸಂದೇಶ ತಿಳಿಸಿದ್ದಾರೆ.
World Heart Day ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನಿಯಮಿತವಾಗಿ ಹೃದಯ ತಪಾಸಣೆ ಮಾಡಿಸಿ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆ ಗಮನಹರಿಸಿ ಎಂದು ಹೇಳಿದ್ದಾರೆ.