Swachh Bharat Abhiyan ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮವನ್ನು ದಿನಾಂಕ 01-10-23 ರ ಬಾನುವಾರ ಬೆಳಿಗ್ಗೆ 10 ಗಂಟೆಯಿಂದ 11:00ವರೆಗೆ ದೇಶದಾದ್ಯಂತ ಹಮ್ಮಿಕೊಳ್ಳಲಾಗಿತ್ತು.
ಅಕ್ಟೋಬರ್ 02 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮದಿನ ಆಚರಿಸಲಿದ್ದೇವೆ. ಭಾರತವನ್ನು ಸ್ವಚ್ಛವಾಗಿರಿಸುವ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡುವ ಗುರಿಯೊಂದಿಗೆ ದೇಶದಾದ್ಯಂತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ ಎಂಬ ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳ ಕರೆಯ ಮೇರೆಗೆ ನಾವೆಲ್ಲ ಬಹಳ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವ ಮತ್ತು ಪ್ರಾಮುಖ್ಯತೆಯ ಕುರಿತು ಅರಿವು ಮೂಡಿಸಬೇಕಾಗಿದೆ.
ಸಾರ್ವಜನಿಕ ಸ್ಥಳಗಳು, ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವುದನ್ನು ನಾವು ನೋಡುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಪ್ಲಾಸ್ಟಿಕ್ ಅವ್ಯಾಹತ ಬಳಕೆ ಎಂಬುದನ್ನು ತಜ್ಞ ವೈದ್ಯರು ದೃಢಪಡಿಸಿದ್ದರೂ ಸಹಾ ನಾವುಗಳು ಎಚ್ಚೆತ್ತುಕೊಳ್ಳದೇ ಮೈಮರೆಯುತ್ತಿದ್ದೇವೆ. ಈ ಕುರಿತು ಕೂಡಲೇ ಘನ ಸರ್ಕಾರ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪತ್ತಿಯನ್ನು ನಿಲ್ಲಿಸದಿದ್ದರೆ ಮುಂದೆ ಬಹುದೊಡ್ಡ ಗಂಡಾಂತರವನ್ನು ಮನುಷ್ಯನನ್ನೂ ಸೇರಿ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳು ಎದುರಿಸಬೇಕಾಗುತ್ತದೆ.
Swachh Bharat Abhiyan ಜೀವ ವೈವಿಧ್ಯತೆಯ ನಾಶವನ್ನು ತಡೆಯುವಲ್ಲಿ ನಾವೇಲ್ಲಾ ದೃಢ ಸಂಕಲ್ಪ ಮಾಡಬೇಕಾಗಿದೆ.
ಎಲ್ಲಾ ಸಂಘ ಸಂಸ್ಥೆಯವರು, ಸರ್ಕಾರಿ ನೌಕರರು, ಸಾರ್ವಜನಿಕರು ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ.
ವಾರಕ್ಕೊಮ್ಮೆಯಾದರೂ ನಮ್ಮ ನಮ್ಮ ಬಡಾವಣೆಗಳಲ್ಲಿ/ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಸಂರಕ್ಷಣೆ ಮಾಡೋಣ ಎಂದು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ನಾಗರಾಜ್ ಪರಿಸರ ಅವರು ತಿಳಿಸಿದ್ದಾರೆ.