Wednesday, October 2, 2024
Wednesday, October 2, 2024

Kuvempu University ಕಾಲಘಟ್ಟಕ್ಕೆ ಪೂರಕವಾಗಿ ಪಠ್ಯಕ್ರಮ ಬೋಧನಾ ಕೌಶಲ್ಯ ಕಲಿಯಬೇಕು- ಡಾ.ಕೆ.ಎ.ವಿಷ್ಣುಮೂರ್ತಿ

Date:

Kuvempu University ಉಪನ್ಯಾಸಕರು ಆಧುನಿಕ ತಂತ್ರಜ್ಞಾನ ಹಾಗೂ ಕಾಲಘಟ್ಟಕ್ಕೆ ಪೂರಕವಾಗಿ ಪಠ್ಯಕ್ರಮ ಬೋಧಿಸುವ ಕೌಶಲಗಳನ್ನು ಕಲಿಯುವುದು ಅತ್ಯಂತ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣು ಮೂರ್ತಿ ಹೇಳಿದರು.

ಚಿಕ್ಕಮಗಳೂರಿನ ಎವಿಎಸ್ ಶಿಕ್ಷಣ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಮತ್ತು ಶಿಕ್ಷಕರ ಸಂಘದ ಸಹಯೋಗದಲ್ಲಿ ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ “ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು” ವಿಷಯ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಪಠ್ಯಕ್ರಮವನ್ನು ಪರಿಣಾಮಕಾರಿಯಾಗಿ ಬೋಧಿಸಲು ಇಂದಿನ ಯುಗದ ಹೊ‌ಸ ತಂತ್ರಜ್ಞಾನವನ್ನು ಉಪನ್ಯಾಸಕರು ಕಲಿತುಕೊಳ್ಳಬೇಕು. ನಮಗೆ ಹೊಸ ಹೊಸ ವಿಷಯಗಳ ಬಗ್ಗೆ ಅರಿವು ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಉತ್ತಮ ವಿದ್ಯಾರ್ಥಿಗಳ ರೂಪಿಸಲು ಉಪನ್ಯಾಸಕರು ಕೌಶಲ್ಯಗಳನ್ನು ಹೆಚ್ಚು ಹೆಚ್ಚು ಕಲಿತುಕೊಳ್ಳಬೇಕು ಎಂದು ತಿಳಿಸಿದರು.

Kuvempu University ಎವಿಎಸ್ ಶಿಕ್ಷಣ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಡಾ. ವೀರಣ್ಣ ಸಜ್ಜನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತ ಕಾರ್ಯಾಗಾರ ಅತ್ಯಂತ ಉಪಯುಕ್ತ ಕಾರ್ಯಕ್ರಮ ಆಗಿದ್ದು,‌ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರು ‌ಮಹತ್ತರ ಪಾತ್ರ ವಹಿಸುತ್ತಾರೆ. ಶಿಕ್ಷಕರು ಹೊಸ ಪಠ್ಯಕ್ರಮಗಳ ಬಗ್ಗೆ ಶೀಘ್ರ ಅರಿತುಕೊಂಡು ಪರಿಣಾಮಕಾರಿ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಪ್ರಾಚಾರ್ಯ ಪ್ರೊ. ಪಂಚಾಕ್ಷರಯ್ಯ ಮಾತನಾಡಿ, ಶಿಕ್ಷಣ ಬದುಕಿನ ಸಾಮಾರ್ಥ್ಯ ಹಾಗೂ ಮೌಲ್ಯ ಹೆಚ್ಚಿಸುವಂತಿರಬೇಕು. ಶಿಕ್ಷಣ ಪ್ರಮಾಣ ಜನಸಂಖ್ಯೆಗೆ ಅನುಗುಣವಾಗಿ ಶೇ. 80ಕ್ಕಿಂತ ಹೆಚ್ಚು ಇದ್ರೆ ಅತ್ಯಂತ ವೇಗಗತಿಯಲ್ಲಿ ಸಮಾಜ ಅಭಿವೃದ್ಧಿ ಹೊಂದುತ್ತದೆ. ಉಪನ್ಯಾಸಕರು ಹೆಚ್ಚಿನ ಕೌಶಲ್ಯ ಹೊಂದಿರಬೇಕು ಎಂದು ತಿಳಿಸಿದರು.

ಪ್ರೊ. ಗೀತಾ ಸಿ., ಎವಿಎಸ್ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಅಜೇಶ್ ವಿ.ಎಸ್. ಕುವೆಂಪು ವಿಶ್ವವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಮತ್ತು ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಪರಮೇಶ್ವರಪ್ಪ ಎಚ್.ಎಂ., ಜಿಪಂನ ನವೀದ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...