Saturday, December 6, 2025
Saturday, December 6, 2025

Rotary Club Shivamogga ಮಕ್ಕಳನ್ನು ಅರ್ಥಮಾಡಿಕೊಂಡು ಶಿಕ್ಷಕರು ಮಾರ್ಗದರ್ಶನ ಮಾಡಬೇಕು- ಎಸ್.ಎನ್.ರೂಪಾ

Date:

Rotary Club Shivamogga ಶಿಕ್ಷಕರು ಕೇವಲ ಪಾಠ ಮಾಡುವುದಕ್ಕೆ ಮಾತ್ರ ಸೀಮಿತವಲ್ಲ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಉತ್ತಮ ರೀತಿ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ ಎಂದು ಕಮಲಾ ನೆಹರು ಕಾಲೇಜಿನ ಉಪನ್ಯಾಸಕಿ ರೂಪಾ ಎಸ್.ಎನ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪ್ರತಿಯೊಂದು ಹಂತದಲ್ಲಿಯೂ ಮಕ್ಕಳನ್ನು ಅರ್ಥ ಮಾಡಿಕೊಂಡು ಶಿಕ್ಷಕರು ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ವಿದ್ಯಾರ್ಥಿಗಳು ಕ್ರೀಡಾ ಇಲಾಖೆಯಿಂದ ಸಿಗುವ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಕ್ರೀಡಾ ಹಾಸ್ಟೆಲ್ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ ಆಗಿದ್ದು, ಶಿಕ್ಷಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುತ್ತಾರೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ವಾಣಿಶ್ರೀ, ರೂಪಾ ಎಸ್.ಎನ್., ಯಶೋಮತಿ, ಶ್ರೀಕಾಂತ್.ಎ.ವಿ., ಮಮತಾ ಆರ್., ಅಲೇಖ ಎಸ್.ಆರ್., ಡಾ. ಕಲೀಂ ಉಲ್ಲಾ, ಸಿದ್ದಲಿಂಗಮೂರ್ತಿ, ಮಹಾದೇವಿ ಅವರನ್ನು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಅಭಿನಂದನೆ ಸ್ವೀಕರಿಸಿದ ಡಾ. ಕಲೀಂ ಉಲ್ಲಾ ವಿಶೇಷ ನಗೆ ಭಾಷಣ ಮಾಡಿದರು. ಡಿಪ್ಲೋಮಾ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ನೆರವು ನೀಡಲಾಯಿತು.

ಡಾ. ಸಿದ್ದಲಿಂಗಮೂರ್ತಿ, ಮಂಜುಳಾ ರಾಜು, ರೋಟರಿ ಪಿಡಿಜಿ ಎಚ್.ಎಲ್.ರವಿ, ಕಾರ್ಯದರ್ಶಿ ಪ್ರಕಾಶ್ ಮೂರ್ತಿ, ಪಾಂಡುರAಗ, ಮುಸ್ತಕ್, ಮಸೂದ್, ಚನ್ನಬಸವಗೌಡ, ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...