Sunday, December 7, 2025
Sunday, December 7, 2025

Vokkaliga community development ಒಕ್ಕಲಿಗ ಸಮುದಾಯಕ್ಕೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಕಟಣೆ

Date:

VOkkaliga community development ಒಕ್ಕಲಿಗ ಸಮುದಾಯಗಳಿಗೆ ಸೇರಿದ ಜನರ ಅಭಿವೃದ್ದಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-3 ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರ.ಸಂ.1 ರ (ಎ) ರಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಕಾರ್ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್‍ಒಕ್ಕಲಿಗ, ರೆಡ್ಡಿಒಕ್ಕಲಿಗ, ಮರಸುಒಕ್ಕಲಿಗ, ಗೌಡ /ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.

vokkaliga community development ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ತೆರೆದ ಬಾವಿ, ಸಾಮೂಹಿಕ ಏತನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ(ಹೊಸ ಮತ್ತು ನವೀಕರಣ), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ನಿಗಮವು ಅನುಷ್ಟಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಮಾನ್ಯ ಶಾಸಕರು/ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್‍ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಬಹುದು.

ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಗಳ ಮೂಲಕ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶ https://kvcdc.karnataka.gov.in ಇಲ್ಲಿ ಅರ್ಜಿಯನ್ನು ದಿ: 30-10-2023 ರೊಳಗೆ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲ https://kvcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-29904350, 29904268 ನ್ನು ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿ ನಗರ, ಶಿವಮೊಗ್ಗ, ದೂ.ಸಂ: 08182-229634 ಇಲ್ಲಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಒಕ್ಕಲಿಗ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...