ಮಳೆ ಮತ್ತು ಪ್ರವಾಹದಿಂದಾಗಿ ರೈತರ ಬೆಳೆಗಳು ನೀರುಪಾಲಾಗಿವೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಅಧಿವೇಶನದಲ್ಲಿ ಬೆಳೆ ಪರಿಹಾರ ಘೋಷಿಸಬೇಕು. ಪ್ರಾಕೃತಿಕ ವಿಕೋಪದಲ್ಲಿ ರೈತರಿಗಾದ ನಷ್ಟ ಪರಿಹಾರ ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ರೈತ ನಾಯಕ ಕೆ.ಟಿ. ಗಂಗಾಧರ ಅವರು ತಿಳಿಸಿದ್ದಾರೆ .
ಎಸ್ ಡಿಆರ್ ಎಫ್ ಮತ್ತು ಎನ್ ಡಿಆರ್ ಎಫ್ ನಿಂದ ಬೆಳೆನಷ್ಟ ತುಂಬಿಕೊಡಬೇಕು. ಭತ್ತ ಮೆಕ್ಕೆಜೋಳಕ್ಕೆ, ಫಂಗಸ್ ತಗುಲಿದ ಪರಿಣಾಮ ತಿನ್ನಲು ಯೋಗ್ಯವಾಗಿಲ್ಲ. ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಷ್ಟ್ರೀಯ ವಿಕೋಪ ಪರಿಸ್ಥಿತಿ ಘೋಷಣೆ ಮಾಡಬೇಕು ಎಂದರು.
ಹಾವೇರಿಯ ಹುಕ್ಕೇರಿಮಠದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ಕನಿಷ್ಠ ಬೆಂಬಲ ಬೆಲೆಯಡಿ ಸಣ್ಣ ರೈತರ ಬತ್ತವನ್ನು ಮಾತ್ರ ಖರೀದಿ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಿರುವುದು ಸರಿಯಾದ ಕ್ರಮವಲ್ಲ. ರೈತರ ಮಧ್ಯೆ ಭೇದಭಾವ ಮಾಡದೇ, ಎಲ್ಲ ರೈತರ ಭತ್ತವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಖರೀದಿ ಪ್ರಕ್ರಿಯೆ. ರೈತರಲ್ಲಿ ಭೇದ ಬೇಡ
Date: