Monday, February 2, 2026
Monday, February 2, 2026

Asian Games ಪಾರೂಲ್ ಚೌಧರಿ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತಕ್ಕೆ ಹೆಮ್ಮೆಯ ಸುವರ್ಣ ತಂದ ಮಹಿಳೆ

Date:

Asian Games ಭಾರತದ ಅಥ್ಲೀಟ್ ಪಾರೂಲ್ ಚೌಧರಿ ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ. 2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಾರೂಲ್ ಚೌಧರಿ ಎರಡನೇ ಪದಕವನ್ನು ಗೆದ್ದುಕೊಂಡಿದ್ದು ಈ ಬಾರಿ ಅವರು ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯರ 5000 ಮೀಟರ್ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಪಾರೂಲ್ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು.

ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಪದಕ ಗೆದ್ದು 5000 ಮೀ ಸ್ಪರ್ಧೆಗೆ ಕಣಕ್ಕಿಳಿದ ಪಾರುಲ್ ನಿಧಾನವಾಗಿ ಆರಂಭವನ್ನು ಪಡೆದುಕೊಂಡರು. 10-ಲ್ಯಾಪ್ ಓಟದ ಬಹುಪಾಲು ಭಾಗದಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿಯೇ ಇದ್ದರು. ಆದರೆ ಅಂತಿಮ ಹಂತದಲ್ಲಿ ಅದ್ಭುತವಾಗಿ ತಮ್ಮ ವೇಗವನ್ನು ಅವರು ಹೆಚ್ಚಿಸಿಕೊಂಡು ಆರಂಭದಿಂದಲೂ ಮೊದಲು ಸ್ಥಾನದಲ್ಲಿ ಓಡುತ್ತಿದ್ದ ಜಪಾನ್‌ನ ರಿರಿಕಾ ಹಿರೋನಾಕಾ ಅವರ ವೇಗವನ್ನು ಸರಿಗಟ್ಟಿದರು.

Asian Games ಇನ್ನು ಇದಕ್ಕೂ ಮುನ್ನ ಸೋಮವಾರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಪಾರುಲ್ ಚೌಧರಿ 9.27.63 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದುಕೊಂಡಿದ್ದರು. ಈ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಯಾವಿ ವಿನ್‌ಫ್ರೈಡ್ ಏಷ್ಯನ್ ಗೇಮ್ಸ್ ದಾಖಲೆಯನ್ನು ಮುರಿದು 9:18.26 ಸೆಕೆಂಡ್‌ಗಳಲ್ಲಿ ಗುರಿತಲುಪಿ ಚಿನ್ನದ ಪದಕ ಗೆದ್ದುಕೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...