Sunday, August 2, 2026
Sunday, August 2, 2026

Mysore Dasara 2023  ಮೈಸೂರು ದಸರಾದಲ್ಲಿ ಪುಸ್ತಕ ಮಳಿಗೆ ತೆರೆಯಲು ಅರ್ಜಿ ಆಹ್ವಾನ

Date:

Mysore Dasara 2023  ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2023 ನ್ನು ದಿನಾಂಕ: 15.10.2023 ರಿಂದ 23.10.2023 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ. ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುತ್ತದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00ಗಳ ಭದ್ರತಾ ಠೇವಣಿಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:12.10.2023 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ.

Mysore Dasara 2023  ನಿರ್ಮಿಸಲಾಗುವ 60 ಮಳಿಗೆಗಳನ್ನುಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ :ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 / 22107704 ಅನ್ನು ಸಂಪರ್ಕಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...