Monday, August 24, 2026
Monday, August 24, 2026

CM Siddharamaih ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಿದ್ಧರಾಮಯ್ಯ,ಡಿ.ಕೆ.ಶಿವಕುಮಾರ್ & ಎಚ್.ಡಿ. ಕುಮಾರಸ್ವಾಮಿ ಅವರಿಂದ ಸಂತಾಪ

Date:

CM Siddharamaih ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು.
ದುರ್ಘಟನೆ ನಡೆದ ಸ್ಥಳಕ್ಕೆ ನಾಳೆ ಭೇಟಿನೀಡಿ, ಪರಿಶೀಲನೆ ನಡೆಸಲಿದ್ದೇನೆ.
ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

ಆನೇಕಲ್‌ ಬಳಿಯ ಅತ್ತಿಬೆಲೆ ಸಮೀಪ ಇಂದು ಸಂಭವಿಸಿರುವ ಪಟಾಕಿ ದುರಂತದಲ್ಲಿ 12 ಮಂದಿ ಜೀವಂತ ದಹನವಾಗಿರುವ ಸುದ್ದಿ ದುಃಖಕರ. ವಿಷಯ ತಿಳಿದ ಕೂಡಲೇ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ.

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

CM Siddharamaih ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದರು.

ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...