Tuesday, February 3, 2026
Tuesday, February 3, 2026

National Means-cum-Merit ಎನ್ಎಮ್ ಎಮ್ಎಸ್ ವಿದ್ಯಾರ್ಥಿ ವೇತನ ಪಡೆಯಲು ಪ್ರಕಟಣೆ

Date:

National Means-cum-Merit 2023-24ನೇ ಸಾಲಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್(ಎನ್‍ಎಂಎಂಎಸ್) ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್‍ಶಿಪ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ.

2019-20, 2020-21, 2021-22 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ರಿನಿವಲ್ ಲಿಂಕ್ ಮೂಲಕ ಮತ್ತು 2023-24 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಫ್ರೆಶ್ ಲಿಂಕ್ ಮೂಲಕ ನೋಂದಣಿ ಮಾಡಿ ನಂತರ ಎನ್.ಎಸ್.ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅ.17 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.

National Means-cum-Merit ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 9, 10, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗಕ್ಕೆ ಪ್ರತಿ ವರ್ಷ ತಲಾ ರೂ.12000/- ಗಳ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಡಿಬಿಟಿ ಮೂಲಕ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಡಯಟ್ ದೂರವಾಣಿ ಸಂಖ್ಯೆ : 08182-270597, ನೋಡಲ್ ಅಧಿಕಾರಿ : 9449379952, 9844342198 ಸಂಖ್ಯೆಗೆ ಅಥವಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...