Monday, May 4, 2026
Monday, May 4, 2026

Shivamogga Police ಜಿಲ್ಲೆಯ ವಿವಿಧೆಡೆ ಪಟಾಕಿ ಮಾರಾಟ ಮಳಿಗೆಗಳ ಸುರಕ್ಷತಾ ಪರಿಶೀಲನೆ ಆರಂಭ

Date:

Shivamogga Police ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಈ ದಿನ ದಿನಾಂಕಃ 11-10-2023 ರಂದು ಶ್ರೀ ಸೆಲ್ವಮಣಿ, ಐಎಎಸ್, ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ, ಮತ್ತು ಶ್ರೀ ಮಿಥುನ್ ಕುಮಾರ್, ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಸೂಚನೆಯ ಮೇರೆಗೆ, ಶಿವಮೊಗ್ಗ-ಎ ಉಪ ವಿಭಾಗದಲ್ಲಿ ಶ್ರೀ ಬಾಲರಾಜ್, ಡಿವೈಎಸ್ ಪಿ, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ ಶ್ರೀ ಸುರೇಶ್ ಎಂ, ಡಿವೈಎಸ್ ಪಿ, ಭದ್ರಾವತಿ ಉಪ ವಿಭಾಗದಲ್ಲಿ ಶ್ರೀ ನಾಗರಾಜ್, ಡಿವೈಎಸ್ ಪಿ, ಸಾಗರ ಉಪ ವಿಭಾಗದಲ್ಲಿ, ಶ್ರೀ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, ಡಿವೈಎಸ್ ಪಿ, ಶಿಕಾರಿಪುರ ಉಪ ವಿಭಾಗದಲ್ಲಿ ಶ್ರೀ ಶಿವಾನಂದ್ ಮದರಖಂಡಿ, ಡಿವೈಎಸ್ ಪಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಶ್ರೀ ಗಜಾನನ ವಾಮನ ಸುತಾರ, ಡಿವೈಎಸ್ ಪಿ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಮಹಾನಗರ ಪಾಲಿಕೆ, ನಗರ ಪಾಲಿಕೆ, ತಾಲ್ಲೂಕು ಪಂಚಾಯತಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿದರು.

ಶಿವಮೊಗ್ಗ-ಎ ಉಪ ವಿಭಾಗದಲ್ಲಿ 03, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ 03, ಭದ್ರಾವತಿ ಉಪ ವಿಭಾಗದಲ್ಲಿ 21, ಸಾಗರ ಉಪ ವಿಭಾಗದಲ್ಲಿ 09, ಶಿಕಾರಿಪುರ ಉಪ ವಿಭಾಗದಲ್ಲಿ 20, ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 07 ಸೇರಿ ಜಿಲ್ಲೆಯಾದ್ಯಂತ ಒಟ್ಟು 63 ಮಳಿಗೆ ಮತ್ತು ಗೋದಾಮುಗಳಲ್ಲಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಮಳಿಗೆ ಹಾಗೂ ಗೋದಾಮುಗಳಲ್ಲಿ ಎಲ್ಲಾ ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಪಟಾಕಿ ಮಾರಾಟ ಮಾಡಲು ನಿರ್ಮಿಸಿರುವ ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಿದರು.

Shivamogga Police ನಿಯಮ ಉಲ್ಲಂಘನೆ ಮಾಡಿ, ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 01 , ವಿನೋಬನಗರ ಪೊಲೀಸ್ ಠಾಣೆಯಲ್ಲಿ 01 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರರಕಣ ಸೇರಿದಂತೆ ಒಟ್ಟು 04 ಪ್ರಕರಣಗಳನ್ನು ದಾಖಲಿಸಿ, ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...