Saturday, December 6, 2025
Saturday, December 6, 2025

Adichunchanagiri Mutt ಶ್ರೀಆದಿಚುಂಚನಗಿರಿ ಮಠದ ಆಶ್ರಯದಲ್ಲಿ ರಾಜ್ಯ ಮಟ್ಟದ 27 ನೇ ಜನಜಾಗೃತಿ ಶಿಬಿರ

Date:

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಪ್ರತಿ ವರುಷದಂತೆ 27ನೇ ರಾಜ್ಯ ಮಟ್ಟದ ಬಾಲಕ ಮತ್ತು ಬಾಲಕಿಯರ ಜನಜಾಗೃತಿ ಶಿಬಿರವನ್ನು ಬರುವ ಅಕ್ಟೋಬರ್ 15 ರಿಂದ 22 ರವರೆಗೆ ಕ್ಷೇತ್ರದ ಬಿಜಿಎಸ್ ಸಭಾ ಮಂಟಪದಲ್ಲಿ ನಡೆಯಲಿದೆ ಎಂದು ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಕಾರ್ಯದರ್ಶಿಗಳು ಆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.

ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ ಆಶಯದಂತೆ 26 ವರ್ಷಗಳಿಂದ ಮಕ್ಕಳಲ್ಲಿ ವ್ಯಕ್ತಿತ್ವದ ನಿರ್ಮಾಣ ಮಾಡಿ, ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಜನಜಾಗೃತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

14 ವರ್ಷ ಮೇಲ್ಪಟ್ಟ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅವಕಾಶವಿದ್ದು, ಶಿಬಿರದಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಉಚಿತ ಊಟ ಹಾಗೂ ವಸತಿಯನ್ನು ಒದಗಿಸಲಾಗುತ್ತದೆ. ಶಿಬಿರಕ್ಕೆ ಸಂಬಂಧಿಸಿದಂತೆ ಸಂಸ್ಕಾರ ಸೌರಭ ಪುಸ್ತಕ ಮತ್ತು ಲೇಖನಿ ಸಾಮಗ್ರಿಯನ್ನು ಉಚಿತವಾಗಿ ನೀಡಲಿದ್ದು, ಪರಿಸರ ನೈರ್ಮಲ್ಯ, ದೈನಂದಿನ ವ್ಯಾಯಾಮ,ಆರೋಗ್ಯದ ರಕ್ಷಣೆ, ಅರಿವು, ಪ್ರಾರ್ಥನೆ, ಧ್ಯಾನ ಮುಂತಾದ ವಿಷಯಗಳ ಕುರಿತು ಉಪನ್ಯಾಸವಿರುತ್ತದೆ. ಯೋಗ, ಜ್ಯೋತಿಷ್ಯ ಭಜನೆ, ಪೂಜಾ ವಿಧಿ ವಿಧಾನಗಳ ಬಗ್ಗೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಕುರಿತು ತರಬೇತಿ ನೀಡಲಾಗುತ್ತದೆ.

Adichunchanagiri Mutt ಯೋಗ ಅಭ್ಯಾಸಕ್ಕೆ ಸಂಬಂಧಪಟ್ಟಂತೆ ಉಡುಪು, ದಿನ ನಿತ್ಯ ಬಳಕೆ ವಸ್ತುಗಳು ಮತ್ತು ಲಘು ಹೊದಿಕೆಯನ್ನು ತರಬೇಕು. ಬೆಲೆ ಬಾಳುವ ವಸ್ತು ಮತ್ತು ಮೊಬೈಲ್ ಗಳನ್ನು ನಿಷೇಧಿಸಲಾಗಿದೆ.

ಶಿಬಿರಾರ್ಥಿಗಳು ಅಕ್ಟೋಬರ್ 15 ರ ಮಧ್ಯಾಹ್ನ ಒಂದು ಗಂಟೆಯ ಒಳಗೆ ಹೆಸರನ್ನು ನೋಂದಾಯಿಸಬೇಕಾಗಿದೆ. ಅಂದು ಸಂಜೆ ಪರಮಪೂಜ್ಯ ಜಗದ್ಗುರು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷ ರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಶಾಖಾಮಠಗಳ ಶ್ರೀಗಳು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಆಗಮಿಸುವ ಶಿಬಿರಾರ್ಥಿಗಳು ಈ ಮೊಬೈಲ್ ಸಂಖ್ಯೆ 9632554368, 97416 70898 ಅಥವಾ 94497 56819 ಗೆ ಸಂಪರ್ಕಿಸಬಹುದು ಎಂದು ಶ್ರೀ ಮಠದ ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...