District Legal Services Authority ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇವರ ಸಂಯುಕ್ತಾಶ್ರದಯಲ್ಲಿ ‘ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ 2017 ರಡಿ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ 3ನೇ ಮಹಡಿಯಲ್ಲಿ ದಿ: 14-10-2023 ರ ಬೆಳಿಗ್ಗೆ 10 ಗಂಟೆಗೆ ಕಾರ್ಯಾಗಾರ ಏರ್ಪಡಿಸಲಾಗಿದೆ.
District Legal Services Authority ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎನ್.ಚಂದನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ಸತ್ರ ನ್ಯಾಯಾಧೀಶರು, ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಅಧ್ಯಕ್ಷರಾದ ನಿಯಾಜ ಅಹ್ಮದ ಎಸ್ ದಫೇದಾರ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಪೊಲೀಸ್ ಅಧೀಕ್ಷಕರಾದ ಜಿ.ಕೆ.ಮಿಥುನ್ ಕುಮಾರ್, ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಜಿಲ್ಲಾ ಮಾನಸಿಕ ಮತ್ತು ಕುಷ್ಟರೋಗ ನಿವಾರಣಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಕಿರಣ್, ಸಿಮ್ಸ್ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ.ರಾಮ್‍ಪ್ರಸಾದ್ ಕೆ ಎಸ್, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗದ ಡಿಹೆಚ್‍ಓ ಹಾಗೂ ಜಿಲ್ಲಾ ಕುಷ್ಟರೋಗ ನಿವಾರಣಾ ಕಾರ್ಯಕ್ರಮಾಧಿಕಾರಿಗಳು, ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಆರ್ ಪಾಲ್ಗೊಳ್ಳುವರು.