Thursday, December 18, 2025
Thursday, December 18, 2025

Accounting course ಯಶಸ್ಸು ಸಾಧಿಸಬೇಕಾದರೆ ಮನೋಸಾಮರ್ಥ್ಯ ಸದೃಢವಾಗಿರಬೇಕು- ಕಿರಣ್ ಎ.ವಸಂತ್

Date:

Accounting course ಪ್ರಸ್ತುತ ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಇದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಗುರುಗಳ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು ಲೆಕ್ಕ ಪರಿಶೋಧಕ ಕಿರಣ್ ಎ ವಸಂತ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ , ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಲೆಕ್ಕ ಪರಿಶೋಧಕ ಕೋರ್ಸ್” ತರಬೇತಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಮುಂದಿನ ಭವಿಷ್ಯ ಉತ್ತಮವಾಗಿ ರೂಪಿಸಿಕೊಳ್ಳಬೇಕಾದರೆ ಹಾಗೂ ಯಶಸ್ಸು ಸಾಧಿಸಬೇಕಾದರೆ ನಮ್ಮ ಮನೋಸಾಮಾರ್ಥ್ಯ ಸದೃಢವಾಗಿ ಇರಬೇಕು. ನಿರಂತರ ಪರಿಶ್ರಮ ಹಾಗೂ ಧೈರ್ಯದಿಂದ ಕಠಿಣ ಸನ್ನಿವೇಶಗಳನ್ನು ನಿಭಾಯಿಸಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಗುರುಗಳ ಮಾರ್ಗದರ್ಶನ ಹಾಗೂ ಸ್ಪಷ್ಟ ಗುರಿ ಇದ್ದಾಗ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಉನ್ನತ ಹಂತಕ್ಕೆ ತಲುಪಲು ಸಾಧ್ಯವಿದೆ. ಪದವಿ ಶಿಕ್ಷಣ ಹಂತದಿಂದಲೇ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದರು.

ಲೆಕ್ಕ ಪರಿಶೋಧಕ ವೃತ್ತಿಯು ಅತ್ಯಂತ ಹೆಚ್ಚು ಬೇಡಿಕೆಯಲ್ಲಿರುವ ಉದ್ಯೋಗ ಅವಕಾಶ ಆಗಿದ್ದು, ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವ ಹಂತದಿಂದಲೇ ಸಿಎ ತರಬೇತಿಗೆ ಪೂರಕವಾಗಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಲು ಮುಂದಾಗಬೇಕು. ಡಿವಿಎಸ್ ಸಂಸ್ಥೆಯು ಲೆಕ್ಕ ಪರಿಶೋಧಕ ತರಬೇತಿ ನೀಡಲು ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.

ಲೆಕ್ಕ ಪರಿಶೋಧಕ ನಾಗರಾಜ್ ಮಾತನಾಡಿ, ಸಿಎ ತರಬೇತಿ ಪೂರ್ಣಗೊಳಿಸಿದ ವ್ಯಕ್ತಿಯು ಯಾವುದೇ ಸ್ಥಳದಲ್ಲಿ ಆದರೂ ವೃತ್ತಿ ಜೀವನ ರೂಪಿಸಿಕೊಳ್ಳಬಹುದಾಗಿದೆ. ಸಣ್ಣ ಊರು, ನಗರಗಳಿಂದ ಪ್ರಮುಖ ನಗರಗಳಲ್ಲಿ ಬೇಕಾದರೂ ವೃತ್ತಿ ಆರಂಭಿಸಬಹುದಾಗಿದೆ. ಹೆಚ್ಚು ಹೆಚ್ಚು ಅವಕಾಶಗಳು ಜೀವನದಲ್ಲಿ ಸಿಗುತ್ತವೆ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಡಿವಿಎಸ್ ಸಂಸ್ಥೆಯು ಶಿಕ್ಷಣದ ಜತೆಯಲ್ಲಿ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಅವಶ್ಯವಿರುವ ವೃತ್ತಿ ಕೌಶಲ್ಯಗಳನ್ನು ಆರಂಭಿಕ ಹಂತದಿಂದಲೇ ತರಬೇತಿ ಕೊಡಿಸುವ ವಿಶೇಷ ವ್ಯವಸ್ಥೆ ಮಾಡಿಕೊಂಡು ಬರುತ್ತಿದೆ. ಇದರಿಂದ ವಿದ್ಯಾರ್ಥಿಗಳು ಭವಿಷ್ಯ ಉತ್ತಮವಾಗುತ್ತದೆ ಎಂದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಹಂತಕ್ಕೆ ಏರಲು ಅಗತ್ಯ ಇರುವ ವೃತ್ತಿ ಕೌಶಲ್ಯಗಳ ಕಲಿಕೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕ ಪರಿಶೋಧಕ ವೃತ್ತಿಯ ಅವಕಾಶಗಳ ಬಗ್ಗೆ ಸಿಎ ಕಿರಣ್ ಎ ವಸಂತ್ ಹಾಗೂ ನಾಗರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.

Accounting course ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್ ಸಿ.ಇ., ಉಪನ್ಯಾಸಕ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...