State Contractors Association ಗುತ್ತಿಗೆದಾರರಿಗೆ ಬಾಕಿ ಇರುವ ಮೊತ್ತದಲ್ಲಿ ಶೇ 50ರಷ್ಟನ್ನು 30 ದಿನಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಸಿದೆ.
ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ , ಆರ್ ಡಿ ಪಿ ಆರ್ ಮತ್ತು ಬಿಬಿಎಂಪಿ ಸೇರಿದಂತೆ ಸುಮಾರು 20 ಸಾವಿರ ಕೋಟಿ ಅಧಿಕ ಬಿಲ್ ಮುಕ್ತ ಪಾವತಿಸಬೇಕಿದೆ. ಹಂತ ಹಂತವಾಗಿ ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದರೂ ಕ್ರಮವಾಗಿಲ್ಲ. ಹಣ ಇಲ್ಲ ಎಂದರೆ ಹೊಸ ಕಾಮಗಾರಿ ಕೈಗೊಳ್ಳಬೇಡಿ ಬಾಕಿಯನ್ನು ಮೊದಲು ಪಾವತಿ ಮಾಡಿ ಎಂದು ರಾಜ್ಯ ಘಟಕದ ಅಧ್ಯಕ್ಷರಾದ ಡಿ. ಕೆಂಪಣ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
State Contractors Association ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ವಿವಿಧ ಇಲಾಖೆಯ ಸಚಿವರನ್ನೂ ಭೇಟಿ ಮಾಡಿದ್ದೇವೆ. ಆದರೂ ಗುತ್ತಿಗೆದಾರರ ಸಂಕಷ್ಟ ಅವರಿಗೆ ತಿಳಿಯುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ’ ಎಂದರು.
ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ. ತನಿಖೆ ಪಕ್ಕಕ್ಕಿಟ್ಟು ಬಿಲ್ ಪಾವತಿ ಮಾಡಲಿ ಎಂದು ಆಗ್ರಹಿಸಿದ್ದಾರೆ.