Monday, May 4, 2026
Monday, May 4, 2026

Punit Rajkumar ಗಾಳಿಗುಡ್ಡೆಯಲ್ಲಿ ನಟ ಡಾ.ಪುನೀತ್ ಪುತ್ಥಳಿ ಸ್ಥಾಪನೆ ಸಮಾರಂಭ

Date:

Punit Rajkumar ಜಾಗರ ಹೋಬಳಿ ಕಸಾಪ, ಗಾಳಿಗುಡ್ಡೆ ಗ್ರಾಮಸ್ಥರು, ಕೆಳಚಂದ್ರ ಗ್ರೂಫ್ ಹಾಗೂ ಪುನೀತ್ ಗೆಳೆಯರ ಬಳಗದ ವತಿಯಿಂದ ತಾಲ್ಲೂಕಿನ ಗಾಳಿಗುಡ್ಡೆ ಗ್ರಾಮದಲ್ಲಿ ನಟ ಪುನೀತ್‌ಕುಮಾರ್ ಸ್ಮರಣಾರ್ಥ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯವು ಅ.19 ರಂದು ಬೆಳಿಗ್ಗೆ 09 ಗಂಟೆಗೆ ನಡೆಯಲಿದೆ ಎಂದು ಕಸಾಪ ಹೋಬಳಿ ಘಟಕದ ಗೌರವಾಧ್ಯಕ್ಷ ಕಳವಾಸೆ ರವಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಳೆದ ಹಲವು ವರ್ಷಗಳ ಹಿಂದೆ ಗ್ರಾಮ ದಲ್ಲಿ ಕನ್ನಡದ ಧ್ವಂಜಕಟ್ಟೆ ಹಾಗೂ ನಟ ಪುನೀತ್‌ರಾಜ್‌ಕುಮಾರ್ ಅವರ ಪುತ್ಥಳಿ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಲಾಗಿತ್ತು. ಅದಾದ ಬಳಿಕ ಕೊರೋನಾ ಹಾಗೂ ಅಕಾಲಿಕವಾಗಿ ಮೃತರಾದ ಪುನೀತ್ ನೋವಿನಿಂದ ಪುತ್ಥಳಿ ನಿರ್ಮಾಣ ತಡವಾಗಿದೆ ಎಂದಿದ್ದಾರೆ.

ಇದೀಗ ಗಾಳಿಗುಡ್ಡೆ ಗ್ರಾಮದಲ್ಲಿ ಅ.೧೯ ರಂದು ಪುತ್ಥಳಿ ಪ್ರತಿಷ್ಟಾಪನೆ ಕಾರ್ಯಕ್ಕೆ ಕೈಹಾಕಿದ್ದು ಕೆಳಚಂದ್ರ ಗ್ರೂಪ್ ೪ ಲಕ್ಷ ದೇಣ ಗೆ ಹಾಗೂ ಧ್ವಂಜಸ್ಥಂಬ ಸೇರಿದಂತೆ ಒಟ್ಟು 8 ಲಕ್ಷ ರೂ. ವ್ಯಯಿಸಿದ್ದು ಮುಂದಿನ ನವೆಂಬರ್ ತಿಂಗಳ ಅಂತಿಮದೊಳಗೆ ಪುತ್ಥಳಿ ಅನಾವರಣಕ್ಕೆ ಮುಂದಾಗಲಾಗುವುದು ಎಂದು ತಿಳಿಸಿದ್ದಾರೆ.

Punit Rajkumar ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಅನಾವರಣಗೊಳ್ಳುತ್ತಿರುವ ನಾಲ್ಕು ಅಡಿ ಎತ್ತರದ ಪುನೀತ್‌ರಾಜ್ ಕುಮಾರ್ ಪುತ್ಥಳಿಕೆ ಕಾರ್ಯಕ್ರಮಕ್ಕೆ ಸಚಿವ ಕೆ.ಜೆ.ಜಾರ್ಜ್, ಶಾಸಕ ಹೆಚ್.ಡಿ.ತಮ್ಮಯ್ಯ, ಮಾಜಿ ಸಚಿವ ಸಿ.ಟಿ.ರವಿ, ಜಿಲ್ಲಾ ಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಸಿನಿಮಾ ನಟರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಈಗಾಗಲೇ ಹೋಬಳಿ ಘಟಕದ ಕಸಾಪ ವತಿಯಿಂದ ಹಲವಾರು ಗ್ರಾಮಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮ ವನ್ನು ಆಯೋಜಿಸಿ ಸಾಮಾಜಿಕ ಚಟುವಟಿಕೆಗಳನ್ನು ರೂಪಿಸಿಕೊಂಡು ಬಂದಿದೆ. ಜೊತೆಗೆ ಅನಾವರಣ ದಿನದಂದು ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...