Klive.news ಮುಂದಿನ ಜನಾಂಗವನ್ನು ಮುನ್ನಡೆಸುವ ವಿದ್ಯಾರ್ಥಿಗಳು ನಿಮ್ಮ ಪ್ರತಿಭೆಯನ್ನು ಹೊರಹೊಮ್ಮಿಸಲು ಮಾಧ್ಯಮ ಸಹಕಾರಿಯಾಗುತ್ತದೆ ಎಂದು ಕೆ ಲೈವ್ ನ್ಯೂಸ್ ಚಾನಲ್ ನ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಕೀಳಂಬಿ ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕೆಲೈವ್ ನ್ಯೂಸ್ ಚಾನೆಲ್ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಎಟಿಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೆ ಲೈವ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಟಿಎಂ ಸಿ ಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಪಿ. ಆರ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ನಮ್ಮ ಪ್ರತಿಭೆಯನ್ನು ಹೊರಹಾಕಲು ವೇದಿಕೆಯನ್ನು ನಾವು ಕಲ್ಪಿಸಿ ಕೊಡುತ್ತೇವೆ. ತನ್ನು ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾದ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯ್ ಕುಮಾರ್ ಅವರು ಮಾತನಾಡಿ, ಕೆ ಲೈವ್ ನ್ಯೂಸ್ ಚಾನಲ್ ವರ್ಷಗಳಲ್ಲಿ ನಿಖರವಾದ ಸುದ್ದಿಗಳನ್ನು ನೀಡಿ, ಎಲ್ಲರ ಗಮನ ಸೆಳೆಯುವ ಹಾಗೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
Klive.news ಕಾರ್ಯಕ್ರಮದಲ್ಲಿ ಕೆ ಲೈವ್ ನ್ಯೂಸ್ ಪ್ರಧಾನ ಸಂಪಾದಕರಾದ ಡಾ.ಸುಧೀಂದ್ರ, ಪ್ರೋ. ಕೆ.ಎಂ.ನಾಗರಾಜ್ ಇನ್ನೂ ಮುಂತಾದವರು ಉಪಸ್ಥಿತ ರಿದ್ದರು.