Supreme Court ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟಿರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಕೆಲಸದ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರದ ಪ್ರಾಧಿಕಾರಗಳು 30 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಹೇಳಿದೆ.
ಕಾರ್ಮಿಕರಿಗೆ ಬೇರೆ ಯಾವುದೇ ರೀತಿಯ ಅಂಗವೈಕಲ್ಯ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರೂ. 10 ಲಕ್ಷದವರೆಗೆ ಪರಿಹಾರ ಒದಗಿಸಬೇಕು ಎಂದು ನ್ಯಾಯಮೂರ್ತಿ ಭಟ್ ಅವರು ಆದೇಶದಲ್ಲಿ ಹೇಳಿದ್ದಾರೆ. ಒಳಚರಂಡಿ, ಶೌಚಗುಂಡಿ ಇಳಿದು ಕಾರ್ಮಿಕರು ಜೀವ ಕಳೆದುಕೊಳ್ಳುವ ಸಂದಭ ಎದುರಾಗದಂತೆ ಸರ್ಕಾರದ ಸಂಸ್ಥೆಗಳು ಸಮನ್ವಯದಿಂದ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
Supreme Court ಒಳಚರಂಡಿ ಸ್ವಚ್ಛಗೊಳಿಸುವಾಗ ಕಾರ್ಮಿಕರು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ಅವರಿಗೆ ಕನಿಷ್ಠ 20 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎಸ್. ರವೀಂದ್ರ ಭಟ್ ಮತ್ತು ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಆದೇಶಿಸಿದೆ. ‘ಒಳಚರಂಡಿ, ಶೌಚಗುಂಡಿಯನ್ನು ಬರಿಗೈಯಿಂದ ಸ್ವಚ್ಛಗೊಳಿಸುವ ಪದ್ಧತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ಇಲ್ಲವಾಗಿಸಬೇಕು’ ಎಂದು ತಾಕೀತು ಮಾಡಿದೆ.