Saturday, June 20, 2026
Saturday, June 20, 2026

Department of Social Welfare ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ

Date:

Department of Social Welfare ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ದಿ: 28-102-2023 ರ ಬೆಳಿಗ್ಗೆ 11.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಘೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

Department of Social Welfare ವಿಧಾನಸಭಾ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರಪಾಲಿಕೆ ಮಹಾಪೌರರು, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಪಾಲ್ಗೊಳ್ಳುವರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಎಸ್.ಎಂ.ಮುತ್ತಯ್ಯ ವಿಶೇಷ ಉಪನ್ಯಾಸ ನೀಡುವರು. ಅಂದು ಬೆಳಿಗ್ಗೆ 9.30 ಕ್ಕೆ ನಗರದ ಸೈನ್ಸ್ ಮೈದಾನದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಏರ್ಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...