Saturday, December 6, 2025
Saturday, December 6, 2025

Madhu Bangarappa ಶಾಲಾ ನಿರ್ವಹಣೆಗೆ₹ 10,000 ವಾರ್ಷಿಕ ಅನುದಾನ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆಯ ಜೊತೆಗೆ ನವೆಂಬರ್ 23 ರಿಂದಲೇ ಅನ್ವಯಗೊಳ್ಳುವಂತೆ ಮತ್ತಷ್ಟು ಪೌಷ್ಠಿಕಾಂಶಯುಕ್ತ ಆಹಾರವನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಪುಸ್ತಕಹೊರೆಯನ್ನು ಇಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ವರ್ಷದಿಂದಲೇ ಅನ್ವಯಗೊಳ್ಳುವಂತೆ ಈ ಕಾರ್ಯವನ್ನು ಅನುಷ್ಟಾನಗೊಳಿಸಲಾಗುವುದು ಎಂದರು.

ರಾಜ್ಯದ ಶಾಲೆಗಳ ನಿರ್ವಹಣೆಗೆ ಪ್ರತಿ ವರ್ಷ ಹತ್ತು ಸಾವಿರ ರೂಪಾಯಿಗಳ ಅನುದಾನ ನೀಡಲಾಗುತ್ತಿದೆ. ಈ ಅನುದಾನವನ್ನು ಇಪ್ಪತ್ತು ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಅನುದಾನವನ್ನು ಬಳಸಿ, ಶಾಲಾ ಸ್ವಚ್ಚತೆ ಹಾಗೂ ಶೌಚಾಲಯಗಳ ನಿರ್ವಹಣೆಗೆ ಶಾಲಾ ಮುಖ್ಯ ಶಿಕ್ಷಕರು ಗಮನಹರಿಸಬೇಕೆಂದವರು ನುಡಿದರು.

ಈಗಾಗಲೇ 13,000 ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಉಳಿದ 4000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಕ್ಟೋಬರ್ 30ರಂದು ನ್ಯಾಯಾಲಯದ ಆದೇಶದ ನಂತರ ಕ್ರಮ ವಹಿಸಲಾಗುವುದು ಎಂದ ಅವರು ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿಯನ್ನು ಅನುಸರಿಸುವ ನಿಟ್ಟಿನಲ್ಲಿ ಮುಂದಿನ ಸಾಲಿನಲ್ಲಿ 15,000 ಕಲಾ ಮತ್ತು ಸಂಗೀತ ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ.

ಒಟ್ಟಿನಲ್ಲಿ ಸ್ಥಳೀಯ ಸಂಪನ್ಮೂಲವನ್ನು ಬಳಸಿಕೊಂಡು ಗುಣಾತ್ಮಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವಲ್ಲಿ ಗಮನಹರಿಸಲಾಗುವುದು ಎಂದವರು ನುಡಿದರು.

ಅಲ್ಲದೇ ರಾಜ್ಯದ ಅಜೀಂ ಫೌಂಡೇಶನ್, ಇನ್ಫೋಸಿಸ್ ಹಾಗೂ ಟೊಯೊಟಾ ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಶಿಕ್ಷಕರಿಗೆ ಹೆಚ್ಚುವರಿಯಾಗಿ ಮುಂದಿನ 2 ವರ್ಷಗಳಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದವರು ನುಡಿದರು.

ಬರುವ ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಈ ಹಿಂದೆಯೇ ಸೊರಬ ಹೊರತುಪಡಿಸಿ, ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಶರಾವತಿ ಹಿನ್ನೀರಿನಿಂದ ಸೊರಬ, ಶಿರಾಳಕೊಪ್ಪ ಸೇರಿದಂತೆ ೩೫೧ಹಳ್ಳಿಗಳಿಗೆ ಅಲ್ಲದೇ ಕಾರಾವಾರ ಜಿಲ್ಲೆಗಳಿಗೂ ನೀರನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.

ಗ್ರಾಮೀಣ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದAತೆ ನಿರಂತರವಾಗಿ ಪರಿವರ್ತನಾ ನಿಯಮದ ಆಧಾರದ ಮೇಲೆ ದಿನದ 5 ಗಂಟೆ ವಿದ್ಯುತ್ ಹರಿಸಲು ಮೆಸ್ಕಾಂನ ಉನ್ನತ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಅಂತೆಯೇ ವಿದ್ಯುತ್‌ನ ಸಮಸ್ಯೆಯ ಇತ್ಯರ್ಥಕ್ಕೆ ಕ್ರಮ ವಹಿಸಲಾಗುವುದು ಎಂದರು.
ನಗರದ ಸರ್ವಾಂಗೀಣ ವಿಕಾಸಕ್ಕಾಗಿ ಕೇಂದ್ರ ಅನುದಾನದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳಲ್ಲಿ ಅಕ್ರಮ ಹಾಗೂ ಕಳಪೆ ಕಾಮಗಾರಿಗಳು ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗಂಭೀರ ಸ್ವರೂಪದ ಆರೋಪಗಳು ಕಂಡುಬAದಿರುವ ಹಿನ್ನೆಲೆಯಲ್ಲಿ ಹಾಗೂ ಒಂದು ಸಾವಿರ ಕೋಟಿ ರೂಪಾಯಿಗಳ ಬೃಹತ್‌ಮೊತ್ತ ಆಗಿರುವುದರಿಂದ ಬಹುಬೇಗ ತನಿಖೆಯನ್ನು ಕೈಗೊಳ್ಳಲಾಗುವುದು ಎಂದ ಅವರು, ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ಅಥವಾ ಗುತ್ತಿಗೆದಾರರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

Madhu Bangarappa ಶಿವಮೊಗ್ಗ – ಭದ್ರಾವತಿ ನಡುವೆ ನಗರ ಸಾರಿಗೆ ಬಸ್‌ಗಳ ಸಂಚಾರದಲ್ಲಿ ತೀವ್ರ ತರಹದ ಅಡಚಣೆ ಉಂಟಾಗಿರುವುದನ್ನು ಗಮನಿಸಲಾಗಿದೆ. ಶಕ್ತಿ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಹಿಂದಿನಂತೆ ಇನ್ನಷ್ಟು ಸಾರಿಗೆ ಸಂಚಾರಿ ಬಸ್‌ಗಳನ್ನು ಓಡಿಸುವಲ್ಲಿ ಸಾರಿಗೆ ಇಲಾಖೆಯ ಆಯುಕ್ತರೊಂದಿಗೆ ಚರ್ಚಿಸಿ ಕ್ರಮವಹಿಸಲಾಗುವುದು.

ಇದರೊಂದಿಗೆ ಈ ಹಿಂದೆ ನುಡಿದಂತೆ ನಗರದ ಹೃದಯಭಾಗದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣದ ಕನಸು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...