Monday, May 4, 2026
Monday, May 4, 2026

Rotary Shivamogga ಈಗಲಾದರೂ ಜಾಗೃತರಾಗಿ ಪರಿಸರ ರಕ್ಷಿಸುವ ಕಾರ್ಯ ಮಾಡೋಣ

Date:

Rotary Shivamogga ಪರಿಸರ ನಾಶದಿಂದ ಮನುಕುಲ ತೊಂದರೆಗೆ ಸಿಲುಕಿದ್ದು, ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ರಕ್ಷಿಸುವ ಕೆಲಸ ಆಗಬೇಕು. ಪರಿಸರ ಸಂರಕ್ಷಣೆಯು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಆಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.

ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರಕ್ಕೆ ಭೇಟಿ ನೀಡಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಾಯುಮಾಲಿನ್ಯ, ಜಲ ಮಾಲಿನ್ಯ ಸೇರಿದಂತೆ ಪರಿಸರ ಮಾಲಿನ್ಯ ಹೆಚ್ಚಾದರೆ ಬದುಕಲು ಒಳ್ಳೆಯ ವಾತಾವರಣ ಇರುವುದಿಲ್ಲ. ಪ್ರತಿಯೊಬ್ಬರು ಸಸಿಗಳನ್ನು ನೆಡುವ ಜತೆಯಲ್ಲಿ ಪೋಷಣೆ ಕಾರ್ಯ ನಡೆಸಿದರೆ ಉತ್ತಮ ಪರಿಸರ ನಮ್ಮದಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೋಟರಿ ಸಹಾಯಕ ಗವರ್ನರ್ ರವಿ ಕೋಟೋಜಿ ಮಾತನಾಡಿ, ರೋಟರಿ ಸಂಸ್ಥೆ ನಿರ್ವಹಿಸುತ್ತಿರುವ ರೋಟರಿ ಚಿತಾಗಾರವು ಉತ್ತಮವಾಗಿ ನಡೆಯುತ್ತಿದೆ. ಸೂಕ್ತ ವ್ಯವಸ್ಥೆಗಳನ್ನು ಒಳಗೊಂಡಿದೆ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಡಾ. ಪರಮೇಶ್ವರ್ ಶಿಗ್ಗಾವ್ ಮಾತನಾಡಿ, ಪರಿಸರ ನಾಶವು ಹೆಚ್ಚಿನ ಸಮಸ್ಯೆಗಳನ್ನು ತಂದೊಡಲಿದ್ದು, ಪರಿಸರ ನಾಶ ಆಗುವುದನ್ನು ತಪ್ಪಿಸಬೇಕಿದೆ. ಬಾಲ್ಯದಿಂದಲೇ ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸಬೇಕು ಎಂದು ಹೇಳಿದರು.

Rotary Shivamogga ಇದೇ ಸಂದರ್ಭದಲ್ಲಿ ರೋಟರಿ ಚಿತಾಗಾರ ಆವರಣದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ, ಖಜಾಂಚಿ ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಪೂರ್ವ ಸಂಸ್ಥೆಯ ಕಾರ್ಯದರ್ಶಿ ಕಿಶೋರ್ ಕುಮಾರ್, ದಿವ್ಯಾ ಪ್ರವೀಣ್, ಶ್ರೀಕಾಂತ್, ಡಾ. ಗುಡದಪ್ಪ ಕಸಬಿ, ನಿವೃತ್ತ ಡಿಎಫ್‌ಒ ಮಂಜುನಾಥ್, ಸಿ.ಕೆ.ವಿಜಯ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...