Monday, May 4, 2026
Monday, May 4, 2026

Puneet Raj Kumar ಸದ್ಯದಲ್ಲೇ ರಾಜ್ಯ ಸರ್ಕಾರದಿಂದ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಘೋಷಣೆ

Date:

Puneet Raj Kumar ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಹೃದಯಸಂಬಂಧಿ ಉಚಿತ ಚಿಕಿತ್ಸೆಯ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲು ಮುಂದಾಗಿದೆ.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಮೂಲಕ ಯೋಜನೆ ರೂಪಿಸಲಾಗಿದೆ.

ಈ ಯೋಜನೆಗೆ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಅವರ ನೆನಪಿನಲ್ಲಿ `ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ’ ಎನ್ನುವ ಹೆಸರಿಡಲಾಗಿದೆ ಎನ್ನಲಾಗುತ್ತಿದೆ.

ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ ಉಚಿತ ಚಿಕಿತ್ಸೆಯನ್ನು ಶೀಘ್ರದಲ್ಲೇ ನೀಡಲು ರಾಜ್ಯದ 16 ಜಿಲ್ಲೆಗಳಲ್ಲಿರುವ ಶೇ.85 ರಷ್ಟು ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿಯ 50 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಈ ಯೋಜನೆಗೆ ಜೋಡಿಸುವ ಕೆಲಸವಾಗುತ್ತಿದೆ.

Puneet Raj Kumar ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...