Sunday, August 2, 2026
Sunday, August 2, 2026

Kerala Bomb Blast ಕ್ರೈಸ್ತರ ಸಮ್ಮೇಳನದಲ್ಲಿ ಸರಣಿ ಬಾಂಬ್ ಸ್ಫೋಟ

Date:

Kerala Bomb Blast ಕೇರಳದ ಎರ್ನಾಕುಲಂ ಜಿಲ್ಲೆಯ ಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಭೆ ನಡೆಸುತ್ತಿದ್ದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ಮೂರಕ್ಕೆ ಏರಿದೆ.

ಭಾನುವಾರ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಸ್ಪೋಟದಲ್ಲಿ ಬಾಲಕಿ ಕೇರಳದ ಎರ್ನಾಕುಲಂ ಜಿಲ್ಲೆಯ ಲಿಬಿನಾ ತೀವ್ರವಾಗಿ ಗಾಯಗೊಂಡಿದ್ದಳು. ಲಿಬಿನಾ ಅವರ ದೇಹದ ಶೇಕಡ 95 ರಷ್ಟು ಭಾಗ ತೀವ್ರವಾಗಿ ಸುಟ್ಟು ಹೋಗಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಮೂರು ದಿನಗಳ ಪ್ರಾರ್ಥನಾ ಸಭೆಯ ಮುಕ್ತಾಯದ ದಿನದಂದು ಅಲ್ಪಸಂಖ್ಯಾತ ಕ್ರಿಶ್ಚಿಯನ್ ಗುಂಪು ನೂರಾರು ಅನುಯಾಯಿಗಳು ಯೆಹೋವನ ಪ್ರಾರ್ಥನೆಗಾಗಿ ಒಟ್ಟುಗೂಡಿದಾಗ ಸ್ಫೋಟಗಳು ಸಂಭವಿಸಿದವು.

Kerala Bomb Blast ಇದಕ್ಕೂ ಮೊದಲು ಸ್ಫೋಟಗಳಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಈ ಸ್ಪೋಟ ಸಂಭವಿಸಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...