Saturday, September 28, 2024
Saturday, September 28, 2024

Rotary Shimoga East ರೋಟರಿ ಶಿವಮೊಗ್ಗ ಪೂರ್ವ ಚಾಂಪಿಯನ್

Date:

Rotary Shimoga East ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರೋಟರಿ ವಲಯ 10 ಮತ್ತು 11ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಸತತ 4ನೇ ಬಾರಿಗೆ ವಲಯಮಟ್ಟದ ಚಾಂಪಿಯನ್ ಪಟ್ಟ ಅಲಂಕರಿಸಿತು.

ಇದೀಗ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಭಾವಗೀತೆ ಪ್ರಥಮ, ಸೋಲೊ ಡ್ಯಾನ್ಸ್ ಪ್ರಥಮ, ಯುಗಳ ಗೀತೆ ಪ್ರಥಮ, ಸೊಲೊ ಸಾಂಗ್ ಚಿತ್ರಗೀತೆಯಲ್ಲಿ ದ್ವಿತೀಯ, ಗ್ರೂಪ್ ಸಾಂಗ್ ದ್ವಿತೀಯ, ಗ್ರೂಪ್ ಡ್ಯಾನ್ಸ್ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಪತ್ರ, ಪಾರಿತೋಷಕ ಸ್ವೀಕರಿಸಿತು. ಕುಂದಾಪುರದಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಭಾಗವಹಿಸಲು ಅರ್ಹತೆ ಪಡೆದಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಮಾಜಿ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲ ಸದಸ್ಯರನ್ನು ಒಂದುಗೂಡಿಸಲು ಹಾಗೂ ಪ್ರತಿಭಾ ಪ್ರದರ್ಶನ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಇಂತಹ ಕಾರ್ಯಕ್ರಮ ಆಯೋಜನೆ ಶ್ಲಾಘನೀಯ. ಸ್ಪರ್ಧೆಗಳಲ್ಲಿ ಎಲ್ಲ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ವಲಯ ತರಬೇತುದಾರ ಡಾ. ಗುಡದಪ್ಪ ಕಸಬಿ, ಆನಂದಮೂರ್ತಿ, ಕೆ.ಪಿ.ಶೆಟ್ಟಿ, ಸಹಾಯಕ ಗವರ್ನರ್ ರವಿ ಕೋಟೋಜಿ, ರಾಜೇಂದ್ರ ಪ್ರಸಾದ್, ರೀವರ್ ಸೈಡ್ ಅಧ್ಯಕ್ಷ ಎಸ್.ಮಂಜುನಾಥ್, ಕಾರ್ಯದರ್ಶಿ ಮಂಜುನಾಥ,
ಪ್ರಮುಖರಾದ ಜಗನ್ನಾಥ್, ಧನರಾಜ್, ಮಂಜುನಾಥ್ ಕದಂ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಧರ್ಮೇಂದ್ರ ಸಿಂಗ್, ಕೆ.ಪಿ.ಚಂದ್ರಪ್ಪ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಕಿಶೋರ್ ಕುಮಾರ್, Rotary Shimoga East ವಸಂತ್ ಹೋಬಳಿದಾರ್, ಎಸ್.ಪಿ.ಶಂಕರ್, ಡಾ. ರವಿಕಿರಣ್, ವಿಜಯ್‌ಕುಮರ್ ಸಿ.ಕೆ., 11 ರೋಟರಿ ಕ್ಲಬ್‌ಗಳ ಸದಸ್ಯರು, ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...