Gruha Lakshmi Scheme ರಾಜ್ಯದಲ್ಲಿ ಮಹಿಳೆಯರಿಗಾಗಿ ಸರ್ಕಾರ ಈಗಾಗಲೇ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಬಹುತೇಕ ಯಶಸ್ವಿಯಾಗಿವೆ.
ಈಗ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರು ತಮ್ಮದೇ ಆಗಿರುವ ಉದ್ಯೋಗ ಆರಂಭಿಸಲು ಸರ್ಕಾರ ಸಹಾಯ ಮಾಡುತ್ತದೆ. ಮಹಿಳೆಯರಲ್ಲಿ ಸಾಕಷ್ಟು ಜನ ಮನೆಯಲ್ಲಿ ಖಾಲಿ ಕುಳಿತುಕೊಳ್ಳುವುದಕ್ಕಿಂತ ತಮ್ಮದೇ ಆಗಿರುವ ರೀತಿಯಲ್ಲಿ ಹಣ ಸಂಪಾದನೆ ಮಾಡಲು ಬಯಸುತ್ತಾರೆ. ಆದರೆ, ಅದೆಷ್ಟೋ ಜನರಿಗೆ ಎಲ್ಲಾ ವಿಷಯದಲ್ಲಿಯೂ ಅರಿವು ಇರುವುದಿಲ್ಲ.. ಇದಕ್ಕಾಗಿ ಕೇಂದ್ರ ಸರ್ಕಾರ ಪ್ರಮುಖ ಯೋಜನೆ ಒಂದನ್ನು ಜಾರಿಗೆ ತಂದಿದೆ.
ದೇಶಾದ್ಯಂತ ಪ್ರತಿ ಹಳ್ಳಿ ಹಾಗೂ ಸಣ್ಣ ಪಟ್ಟಣ ಪ್ರದೇಶದಲ್ಲಿ ವಾಸಿಸುವ ಹೆಣ್ಣುಮಕ್ಕಳು ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೊಳಿಸಿದೆ.
ಇದರಿಂದ ಸುಮಾರು ಹೆಣ್ಣು ಮಕ್ಕಳಿಗೆ ಪ್ರಯೋಜನ ಸಿಗಲಿದೆ. ಪ್ರತಿ ಹಳ್ಳಿ ಹಾಗೂ ಸಣ್ಣ ಪುಟ್ಟ ಪಟ್ಟಣಗಳಲ್ಲಿ ಮಹಿಳೆಯರಿಗೆ ತರಬೇತಿ ನೀಡುವುದರ ಮೂಲಕ ಅವರ ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದು ಲಕ್ಪತಿ ದೀದಿ ಯೋಜನೆಯ ಉದ್ದೇಶ.
ಲತ್ಪತಿ ದೀದಿ ಯೋಚನೆ ಅಡಿಯಲ್ಲಿ ಎರಡು ದಶಲಕ್ಷ ಮಹಿಳೆಯರು ಪ್ರಯೋಜನ ಪಡೆದುಕೊಳ್ಳಲಿದ್ದಾರೆ, ಯಾರು ಉದ್ಯೋಗ ಮಾಡಲು ಬಯಸುತ್ತಾರೋ ಅಂತವರಿಗೆ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ.
Gruha Lakshmi Scheme ಪ್ಲಂಬಿಂಗ್, ಎಲ್ ಇಡಿ ಬಲ್ಪ್ ತಯಾರಿಕೆ, ಡ್ರೋನ್ ಗಳ ನಿರ್ವಹಣೆ ಮೊದಲದ ಕೌಶಲ್ಯ ತರಬೇತಿಗಳನ್ನು ಮಹಿಳೆಯರಿಗೆ ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿರುವ ತರಬೇತಿ ಆಗಿರುತ್ತದೆ. ಪ್ರತಿ ರಾಜ್ಯದಲ್ಲಿ ಎರಡು ಕೋಟಿ ಅಷ್ಟು ಮಹಿಳೆಯರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ.