Friday, November 22, 2024
Friday, November 22, 2024

Madhu Bangarappa ಶಿವಮೊಗ್ಗ ಜಿಲ್ಲೆಯ ಪ್ರವಾಸಿತಾಣಗಳ ಅಭಿವೃದ್ಧಿಗೆ ಕ್ರಮ: ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬoಧಿಸಿದoತೆ ನೆರೆಯ ಕಾರವಾರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖಾ ಸಚಿವರೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ, ಚರ್ಚಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬoಧಿಸಿದoತೆ ನಡೆದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ವಿಫುಲ ಅವಕಾಶಗಳಿದ್ದು, ಅವು ಅನುಷ್ಟಾನಗೊಳ್ಳದಿರುವುದು ಬೇಸರವೆನಿಸಿದೆ ಎಂದ ಅವರು, ಜೋಗ, ಗುಡವಿ ಪಕ್ಷಿಧಾಮ, ಕವಿಶೈಲ, ನಗರಕೋಟೆ, ಚಂದ್ರಗುತ್ತಿ ಸೇರಿದಂತೆ ಜಿಲ್ಲೆಯ ಇನ್ನೂ ಹಲವು ಪ್ರದೇಶಗಳನ್ನು ವಿಸ್ತೃತವಾಗಿ ಅಭಿವೃದ್ಧಿಪಡಿಸಿದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬಹುದಾಗಿದೆ ಎಂದರು.

ಕೆಲವು ಪ್ರವಾಸಿ ಕ್ಷೇತ್ರಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲೇಬೇಕಾದ ಅಗತ್ಯವಿದೆ ಎಂದ ಅವರು ಗುಡವಿ ಪಕ್ಷಿಧಾಮವನ್ನು ಇನ್ನಷ್ಟು ರಚನಾತ್ಮಕವಾಗಿ ಮಾಡುವಲ್ಲಿ ಇರಬಹುದಾದ ಸಾಧ್ಯತೆಗಳ ಕುರಿತು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪ್ಪ ಅವರಿಗೆ ಸೂಚಿಸಿದರು.

ಅದರಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಯಾತ್ರಿ ನಿವಾಸಗಳನ್ನು ನಿರ್ಮಿಸಲು ಅನುದಾನ ಬಿಡುಗಡೆಗೊಂಡಿದ್ದು, ಕೆಲವು ಕಡೆ ಕಟ್ಟಡ ನಿರ್ಮಾಣ ಕಾರ್ಯಾರಂಭಗೊoಡಿದ್ದರೆ, ಇನ್ನೂ ಹಲವು ಕಡೆಗಳಲ್ಲಿ ನಿವೇಶನ, ಅರಣ್ಯ ಭೂಮಿ, ಸಂಬoಧಿಸಿದ ಇಲಾಖೆಯ ಅನುಮತಿ ದೊರೆಯದ ಕಾರಣಕ್ಕಾಗಿ ನಿರ್ಮಾಣ ಕಾರ್ಯ ಸ್ಥಗತಿಗೊಂಡಿದೆ. ಇವೆಲ್ಲವುಗಳನ್ನು ಇತ್ಯರ್ಥಪಡಿಸಲು ಮುಜರಾಯಿ ಇಲಾಖೆಯ ಅಧಿಕಾರಿಗಳೊಬ್ಬರನ್ನು ಇದರ ಉಸ್ತುವಾರಿಗಾಗಿ ನಿಯೋಜಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯೋಜಿತ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖಾ ಅಧಿಕಾರಿಗಳು ಸಮಸ್ಯಾತ್ಮಕ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಸಮಸ್ಯೆಗಳನ್ನು ಅರಿತು ಸಂಬoಧಿಸಿದ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದು ನಿರ್ಮಾಣ ಕಾರ್ಯ ತ್ವರಿತವಾಗಿ ಆರಂಭಗೊಳಿಸುವoತೆ ಅವರು ಸಲಹೆ ನೀಡಿದರು.

ಚಂದ್ರಗುತ್ತಿಯಲ್ಲಿ ನಿರ್ಮಿಸಬೇಕಾಗಿದ್ದ ಯಾತ್ರಿನಿವಾಸಕ್ಕೆ ಅರಣ್ಯ ಇಲಾಖೆಯ ಅಡಚಣೆ ಇದೆ. ಅದನ್ನು ಇತ್ಯರ್ಥಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯಮಾನುಸಾರ ಕಟ್ಟಡ ನಿರ್ಮಿಸಲು ಸಾಧ್ಯವಾದರೆ ಸರಿ. ತಪ್ಪಿದಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಂಡು ಚಂದ್ರಗುತ್ತಿ ಪ್ರದೇಶವನ್ನು ಆಕರ್ಷಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು. ಅಲ್ಲದೇ ಅಲ್ಲಿನ ಪರಿಸರವನ್ನು ಸದಾ ಹಸಿರಾಗಿರುವಂತೆ ಯೋಜನೆ ರೂಪಿಸುವಂತೆ ಅವರು ಸೂಚಿಸಿದರು.

Madhu Bangarappa ಸಿಗಂಧೂರು ಯಾತ್ರಿ ನಿವಾಸ ಅಭಿವೃದ್ಧಿಪಡಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಕೆಳದಿ ಕೋಟೆ, ಕುವೆಂಫು ಅವರ ಕುಪ್ಪಳಿ, ಕವಲೇದುರ್ಗ ಮುಂತಾದ ಪ್ರದೇಶಗಳಲ್ಲಿ ಕೈಗೊಂಡಿರುವ ಹಾಗೂ ಉದ್ದೇಶಿತ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆಲವು ಸ್ಥಳಗಳಲ್ಲಿನ ಅಭಿವೃದ್ಧಿಗೆ ಪುರಾತತ್ವ ಹಾಗೂ ಪ್ರಾಚ್ಯವಸ್ತು ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಸಲಹೆ ಪಡೆದುಕೊಳ್ಳಬೇಕು ಅಲ್ಲದೇ ಅಭಿವೃದ್ಧಿಗೆ ಅನುದಾನ ಪಡೆಯುವಲ್ಲಿ ಅವರ ಸಹಕಾರ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...