Sunday, May 24, 2026
Sunday, May 24, 2026

Road Accident ರಿಪ್ಪನ್ ಪೇಟೆಯಲ್ಲಿ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು: ಕುಟುಂಬಸ್ಥರಿಗೆ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

Date:

Road Accident ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಕ್ಯಾಂಪ್ ನ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಸಾಗರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಮೃತ ಯುವಕರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ನ.4 ಶನಿವಾರ ತಡರಾತ್ರಿ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟಿರುವ ವ್ಯಕ್ತಿಗಳು ಎಂದು ತಿಳಿದು ಬಂದಿದೆ.

ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಸ್ಪರ್ಧಾಳುಗಳಾಗಿ ಭಾಗವಹಿಸಲು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿತ್ತು.

Road Accident ನ್ಯಾರ್ಶಿ ತಿರುವಿನಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಕಂದಕದ ಗದ್ದೆಗೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...