Karnataka Lokayukta ಶಿವಮೊಗ್ಗ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಇವರು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನು ಕೆಳಕಂಡ ದಿನಾಂಕಗಳಂದು ಸ್ವೀಕರಿಸುವರು.
ನ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೊಸನಗರ ತಾಲ್ಲೂಕು ಕಚೇರಿ ಸಭಾಂಗಣ, ನ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ತೀರ್ಥಹಳ್ಳಿ ತಾಲ್ಲೂಕು ಕಚೇರಿ ಸಭಾಂಗಣ ಹಾಗೂ ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ, ನ.22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಸೊರಬ ತಾಲ್ಲೂಕು ಕಚೇರಿ ಸಭಾಂಗಣ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಶಿಕಾರಿಪುರ ತಾಲ್ಲೂಕು ಕಚೇರಿ ಸಭಾಂಗಣ ಹಾಗೂ ನ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಲಾಗುವುದು.
Karnataka Lokayukta ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದೆಂದು ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.