Friday, May 8, 2026
Friday, May 8, 2026

Shimoga District Chamber of Commerce & Industry ಎಂಎಲ್‌ಸಿ ರುದ್ರೇಗೌಡರಿಗೆ ಸನ್ಮಾನ

Date:

Shimoga District Chamber of Commerce & Industry ಕೈಗಾರಿಕಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿ ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತ ಭಾಜನರಾದ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಮಾಚೇನಹಳ್ಳಿ ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಉದ್ಯೋಗ ಸೃಷ್ಠಿಸಿ ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡಿರುವ ಎಸ್.ರುದ್ರೇಗೌಡರು ಸಮಾಜಮುಖಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನೂರಾರು ಯುವ ಸಾಧಕರಿಗೆ ಸ್ಫೂರ್ತಿಯಾಗಿದ್ದಾರೆ.

ಇತ್ತೀಚೆಗೆ ಎಫ್‌ಕೆಸಿಸಿಐ ವತಯಿಂದ ಕೈಗಾರಿಕಾ ವಲಯದಲ್ಲಿ ನೀಡಲಾಗುವುದು ವಿಶೇಷ ಪುರಸ್ಕಾರ ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತರಾಗಿ ಸನ್ಮಾನಿತರಾಗಿದ್ದಾರೆ. ಕೈಗಾರಿಕಾ ಕ್ಷೇತ್ರದ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಎಸ್.ರುದ್ರೇಗೌಡ ಅವರಿಗೆ ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.

ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ರಮೇಶ್ ಹೆಗಡೆ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಎಸ್..ರುದ್ರೇಗೌಡರು ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊಸ ಉದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಆದರ್ಶವಾಗಿದ್ದಾರೆ. ಕೈಗಾರಿಕಾ ಉದ್ಯಮಿಗಳಿಗೆ ಅಗತ್ಯ ಸಹಕಾರ ನಿರಂತರ ಆಗಿರಬೇಕು ಎಂದು ತಿಳಿಸಿದರು.

Shimoga District Chamber of Commerce & Industry ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಆತ್ಮೀಯವಾಗಿ ಅಭಿನಂದಿಸಿದರು. ಸಂಸ್ಥೆಯ ಖಜಾಂಚಿ ಅಶೋಕ್ ಡಿ.ಬಿ., ಉಪಾಧ್ಯಕ್ಷ ಡಿ.ಜಿ.ಬೆನಕಪ್ಪ, ಅಜಿತ್ ಹೆಗಡೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...