Sunday, December 7, 2025
Sunday, December 7, 2025

Deepavali Festival Celebration ಹಬ್ಬಗಳು ನಮ್ಮ ಸಂಸ್ಕೃತಿ ಪ್ರತಿಬಿಂಬಿಸುವ ಕೆಲಸ ಮಾಡುತ್ತವೆ – ಡಾ.ಕೆ.ಆರ್. ಶ್ರೀಧರ್

Date:

Deepavali Festival Celebration ಹಬ್ಬಗಳು ನಮ್ಮ ಸಂಸ್ಕೃತಿ ಪ್ರತಿಂಬಿಸುವ ಕೆಲಸ ಮಾಡುತ್ತವೆ. ಪ್ರೀತಿ ವಿಶ್ವಾಸದ ಜತೆಯಲ್ಲಿ ಆತ್ಮವಿಶ್ವಾಸ ಭರವಸೆ ಹೆಚ್ಚಿಸುವ ಕೆಲಸ ಹಬ್ಬಗಳಿಂದ ಆಗುತ್ತದೆ. ಎಲ್ಲರೂ ಒಟ್ಟುಗೂಡಿ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕ್ಷೇಮ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಆರ್.ಶ್ರೀಧರ್ ಹೇಳಿದರು.

ಶಿವಮೊಗ್ಗ ನಗರದ ಸವಾರ್ ಲೈನ್ ರಸ್ತೆಯಲ್ಲಿರುವ ಸಾವಿತ್ರಮ್ಮ ಫೈನಾನ್ಸ್ನಲ್ಲಿ ಆಯೋಜಿಸಿದ್ದ ಧನಲಕ್ಷ್ಮೀ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಯುವಪೀಳಿಗೆಗೆ ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಹಬ್ಬ ಆಚರಣೆಗಳ ಬಗ್ಗೆ ಯುವ ಸಮುದಾಯಕ್ಕೆ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮನೋವೈದ್ಯ ಡಾ. ಪವಿತ್ರ ಮಾತನಾಡಿ, ಪ್ರತಿಯೊಬ್ಬ ಹಬ್ಬಗಳಿಗೂ ಅದರದ್ದೇ ಆದ ಮಹತ್ವ ಇದ್ದು, ಹಬ್ಬಗಳ ಆಚರಣೆ ಹೊಂದಿರುವ ಧಾರ್ಮಿಕ ಹಿನ್ನೆಲೆಗಳ ಬಗ್ಗೆ ಸಮಗ್ರವಾಗಿ ಅರಿತುಕೊಳ್ಳಬೇಕು. ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಲಕ್ಷ್ಮೀಪೂಜೆ ಆಚರಿಸುತ್ತಿದ್ದು, ವ್ಯಾಪಾರ ವಹಿವಾಟು ಉತ್ತಮವಾಗಿ ಆರ್ಥಿಕ ಶಕ್ತಿ ವೃದ್ಧಿಸಲು ಪ್ರಾರ್ಥಿಸಲಾಗುತ್ತದೆ ಎಂದು ಹೇಳಿದರು.

ಬೇಡಿದ ವರವನ್ನು ಕರುಣಿಸುವ ಧನಲಕ್ಷ್ಮೀ ಆಚರಣೆಯು ದೇಶದ ವಿವಿಧ ಭಾಗಗಳಲ್ಲಿ ದೀಪಾವಳಿ ಸಂದರ್ಭಗಳಲ್ಲಿ ನಡೆಯುತ್ತದೆ. ಸಂಭ್ರಮ ಸಡಗರದಿಂದ ಪ್ರತಿಯೊಬ್ಬರು ಆಚರಣೆ ಮಾಡುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಲಕ್ಷ್ಮೀ ಪೂಜೆಯನ್ನು ಕುಟುಂಬದಲ್ಲಿ ತಲೆಮಾರುಗಳಿಂದ ನಡೆಸಿಕೊಂಡು ಬರುತ್ತಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಹಬ್ಬ ಆಚರಿಸಲಾಗುತ್ತದೆ ಎಂದರು.

Deepavali Festival Celebration ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಎಂಎಲ್‌ಸಿ ಡಿ.ಎಸ್.ಅರುಣ್, ಶ್ರೀಕಾಂತ್, ಡಾ. ನಾಗರಾಜ್, ಇನ್ನರ್ ವೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್ ಕುಮಾರ್, ಗಿನ್ನಿಸ್ ದಾಖಲೆ ಪ್ರಶಸ್ತಿ ಪುರಸ್ಕೃತ ಜಿ.ಸವಿತಾ, ವಾಣಿ, ವಿವಿಧ ಗಣ್ಯರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...