Sunday, October 18, 2026
Sunday, October 18, 2026

Department of Information and Public Relations ಪರಿಶಿಷ್ಟ ಜಾತಿಯ ಮಾಧ್ಯಮ ಸ್ನಾತಕೋತ್ತರ ಅಭ್ಯರ್ಥಿಗಳಿಗೆ ವಾರ್ಷಿಕ ತರಬೇತಿಗೆ ಅರ್ಜಿ ಆಹ್ವಾನ

Date:

Department of Information and Public Relations ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2024ರಿಂದ ಡಿಸೆಂಬರ್-2023ರವರೆಗಿನ 12 ತಿಂಗಳ ತರಬೇತಿ ಇದಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:28-11-2023ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

Department of Information and Public Relations ಮಾಹಿತಿಗಾಗಿ ಇಲಾಖೆಯ ಮಿಂಚೆ0ಚೆ: varthabhavansmg1@gmail.com ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...