B.Y. Vijayendra ರಾಜ್ಯದ ಜನತೆಯ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಬಿಜೆಪಿಗೆ ಸಮರ್ಥ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಹಾಗೂ ವಿ.ಪಕ್ಷದ ನಾಯಕರಾಗಿ ಆರ್.ಅಶೋಕ್‌ರನ್ನು ನೇಮಿಸಿರುವುದು ಕಾರ್ಯಕರ್ತರಲ್ಲಿ ಅತ್ಯಂತ ಹುರುಪು ಮೂಡಿಸಿದೆ ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಹೇಳಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತ್ಯಂತ ಸಣ್ಣವಯಸ್ಸಿನಲ್ಲಿಯೇ ರಾಜ್ಯಾದ್ಯಕ್ಷರಾಗಿ ಆಯ್ಕೆ ಗೊಂಡ ವಿಜಯೇಂದ್ರ ಅವರು ಪಕ್ಷವನ್ನು ಅತ್ಯಂತ ಶಕ್ತಿಯುತವಾಗಿ ಸಂಘಟನೆಗೊಳಿಸಿ ಮುಂಬರುವ ಲೋಕ ಸಭಾ, ಜಿ.ಪಂ., ತಾ.ಪಂ., ಗ್ರಾ.ಪಂ. ಹಾಗೂ ಮಂಡಲ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿ ಪಕ್ಷವನ್ನು ಗಟ್ಟಿಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅದೇ ಮಾದರಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಅವರನ್ನು ನೇಮಿಸಿರುವುದರಿಂದ ರಾಜ್ಯದ ಸಮಸ್ಯೆಯನ್ನು ಅಧಿವೇಶನದಲ್ಲಿ ಪ್ರಶ್ನಿಸಲು ಸೂಕ್ತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಲೆನಾಡು ರೈತರು, ಬೀದಿಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸುವುದು, ವಿದ್ಯಾರ್ಥಿ ವೇತನ ಸ್ಥಗಿತ ಹಾಗೂ ಬರಗಾಲ ಛಾಯೆ ಆವರಿಸಿದ್ದರೂ ಉಸ್ತುವಾರಿ ಮಂತ್ರಿಗಳು ಯಾವುದೇ ಪರಿಹಾರ ಒದಗಿಸುತ್ತಿಲ್ಲ ಎಂದಿದ್ದಾರೆ.
B.Y. Vijayendra ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ಅನುಷ್ಟಾನಗೊಳಿಸದಿರುವುದು ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆ ನಿಭಾಯಿಸದೇ ಕೇವಲ ರಾಜಕೀಯ ದೊಂಬರಾಟದಲ್ಲಿ ತೊಡಗಿರುವ ಕಾಂಗ್ರೆಸ್ ಮುಖಂಡರನ್ನು ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಮೂಲಕ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ.