Thursday, June 18, 2026
Thursday, June 18, 2026

Job Vacancy ಎಂ ಬಿ ಬಿಎಸ್ ಪದವೀಧರರಿಗೆ ನೇರ ಸಂದರ್ಶನಕ್ಕೆ ಆಹ್ವಾನ

Date:

Job Vacancy ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯುವ ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಹುದ್ದೆ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನ.24 ರಂದು ಬೆಳಗ್ಗೆ 11.00 ರಿಂದ ಮ. 1.00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಮತ್ತು ಉಪವಿಭಾಗಿಯ ಆಸ್ಪತ್ರೆ, ಸಾಗರ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲಕ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Job Vacancy ಆನಂತರದಲ್ಲಿ ಡಿ.10 ರವರೆಗೆ ಪ್ರತಿದಿನವೂ ಎಂ.ಬಿ.ಬಿ.ಎಸ್. ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿ ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...