Tuesday, October 1, 2024
Tuesday, October 1, 2024

Bekkina Kalmatha  ಹೊಸ ಯುಗದಲ್ಲಿ ಧರ್ಮದ ಬಗ್ಗೆ ಯುವ ಸಮುದಾಯ ಜಾಗೃತಿ ಹೊಂದಬೇಕು- ಶ್ರೀ ಮಲ್ಲಿಕಾರ್ಜುನ ಮುರುಘಾಶ್ರೀ

Date:

Bekkina Kalmatha  ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕೃತಿ ಪರಂಪರೆಯ ಅರಿವು ಮೂಡಿಸುವುದು ಅಗತ್ಯ. ಸಂಸ್ಕಾರ ಗುಣಗಳನ್ನು ಬಾಲ್ಯದಲ್ಲಿ ಅಳವಡಿಸಿಕೊಳ್ಳುವಂತೆ ಪೋಷಕರು ಮಾರ್ಗದರ್ಶನ ನೀಡಬೇಕು ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಬಸವೇಶ್ವರ ನಗರ ಪಶ್ಚಿಮ ಭಾಗದಲ್ಲಿ ಪ್ರತಿಷ್ಠಾಪಿಸಿರುವ ಶಿವಾಲಯದ ಶಿವಲಿಂಗ ಪುನರ್ ಪ್ರತಿಷ್ಠಾಪನೆ, ಪ್ರಾಣ ಪ್ರತಿಷ್ಠಾಪನೆ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಹೊಸ ಯುಗದಲ್ಲಿ ಧರ್ಮದ ಬಗ್ಗೆ ಯುವ ಸಮುದಾಯ ಜಾಗೃತಿ ಹೊಂದಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಧರ್ಮ, ಆಚಾರ, ವಿಚಾರ, ಸೇವೆ ಹಾಗೂ ಸತ್ಕಾರ್ಯಗಳು ಜೀವನದಲ್ಲಿ ಅತ್ಯಂತ ಮುಖ್ಯ. ನಾವು ಮಾಡಿದ ದಾನ, ಸೇವೆ ನಮ್ಮನ್ನು ಸದಾ ಕಾಪಾಡುತ್ತದೆ. ಇಂತಹ ಧರ್ಮಸಭೆ, ದೇವತಾ ಕಾರ್ಯಗಳು ಧರ್ಮ ಜಾಗೃತಿ ಮೂಡಿಸುತ್ತವೆ. ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಶಿವಮೊಗ್ಗ ನಗರ ಸುಂದರವಾಗಿ ರೂಪುಗೊಂಡಿದ್ದು, ಬಡಾವಣೆಯು ಹೆಚ್ಚಿನ ಅನುದಾನದಿಂದ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದಿನ ದಿನಗಳಲ್ಲಿಯೂ ಅಭಿವೃದ್ಧಿ ನಡೆಯಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಇ.ವಿಶ್ವಾಸ್ ಮಾತನಾಡಿ, ಐದು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ವಾರ್ಡ್ ವ್ಯಾಪ್ತಿಯಲ್ಲಿ ಮಾಡಿದ್ದೇನೆ. ಎಲ್ಲರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.

Bekkina Kalmatha  ಶ್ರೀ ಡಾ. ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಶಿಲಾವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಿ ಪೂಜೆ ನೆರವೇರಿಸಿದರು. ಪ್ರಮುಖರಾದ ಬಿ.ಜಿ.ಚಂದ್ರಪ್ಪ, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ್, ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎ.ರಾಜಪ್ಪ, ಎಸ್.ಸೋಮಶೇಖರಪ್ಪ, ಕೆ.ಆರ್.ವಿಜಯ್‌ಕುಮಾರ್, ಜೆ.ವಿ.ಚಂದ್ರಶೇಖರ್, ನಾಗರಾಜ್, ಎಚ್.ಎಸ್.ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...