Sunday, May 3, 2026
Sunday, May 3, 2026

D. K. Shivakumar ಸಮುದ್ರ ಹೊರಾತಾಗಿ ಸಿಹಿ ನೀರಿನಲ್ಲಿ ಮೀನುಕೃಷಿಗೆ ಮುಂದಾಗಿ- ಡಿ.ಕೆ.ಶಿವ ಕುಮಾರ್

Date:

D. K. Shivakumar ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.

ಮೀನನ್ನು ನಾವು ದೇವರ ಸ್ವರೂಪ ಎಂದು ಕರೆಯುತ್ತೇವೆ. ಶ್ರೀಮನ್‌ ನಾರಾಯಣನಿಗೆ ಮೀನನ್ನು ಹೋಲಿಸುತ್ತೇವೆ. ನಾವು ಚುನಾವಣೆಗೆ ಮುಂಚಿತವಾಗಿ ಮೀನುಗಾರಿಕಾ ಸಮುದಾಯಕ್ಕೆ ಸಾಕಷ್ಟು ಭರವಸೆ ನೀಡಿದ್ದೆವು ಅವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಮಾನ್ಯ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ. ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್
ಭರವಸೆ ನೀಡಿದರು.

D. K. Shivakumar ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ. ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು. ಮಹಶೀರ್‌ ಮೀನು ಹಿಡಿದು ಕೆರೆಯಲ್ಲಿ ವಾಪಸ್‌ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...