Wednesday, September 16, 2026
Wednesday, September 16, 2026

Siddaramaiah ಮೀನುಗಾರಿಕೆ ವಿಶ್ವ ವಿದ್ಯಾಲಯ ಆರಂಭಿಸುವ ಬಗ್ಗೆ ಮುಂದಿನ ವರ್ಷ ಚಿಂತನೆ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯ ವಾಹಿನಿ ಪರಿಸರಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ.
ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ ಎಂದು ತಿಳಿಸಿದ್ದಾರೆ.

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯಿತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.

Siddaramaiah ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ.
1977 ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳು ಸಮುದಾಯದ ಹಿತಕ್ಕಾಗಿ ಮೊದಲ ಸಭೆ ನಡೆಸಿದರು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಮೀನುಗಾರ ಸಮುದಾಯದ ಜತೆ ನೇರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸಿ ಎಲ್ಲಾ ಸಮಸ್ಯೆಗಳಿಗೂ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...