Friday, September 27, 2024
Friday, September 27, 2024

Samanvaya Trust ಸಮನ್ವಯ ಟ್ರಸ್ಟ್ ವತಿಯಿಂದ ಕೆ.ಎ.ದಯಾನಂದ್ ಐಎಎಸ್ ವಾಚನಾಲಯ ಲೋಕಾರ್ಪಣೆಗೆ ಸಿದ್ಧ

Date:

Samanvaya Trust ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ದೃಷ್ಠಿಯಿಂದ ನಿರ್ಮಿಸಿರುವ ಸಮನ್ವಯ ಟ್ರಸ್ಟ್ ನ ನೂತನ ಕಟ್ಟಡ ಕೆ.ಎ.ದಯಾನಂದ ಐಎಎಸ್ ವಾಚನಾಲಯ ಲೋಕಾರ್ಪಣೆಯು ನವೆಂಬರ್ 25ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ.

ಸಮನ್ವಯ ಟ್ರಸ್ಟ್ ಎರಡು ದಶಕಗಳಿಂದ ಸೇವಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅತ್ಯಂತ ಮಾದರಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಇದೀಗ ಮಲೆನಾಡು ಭಾಗದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳ ಕನಸು ನನಸು ಮಾಡುವ ದಿಸೆಯಲ್ಲಿ ವಿಶೇಷ ಪ್ರಯತ್ನಕ್ಕೆ ಸಮನ್ವಯ ಟ್ರಸ್ಟ್ ಮುಂದಾಗಿದೆ.

ಉತ್ತಮ ಆಡಳಿತ ಹಾಗೂ ಸಮಾಜಮುಖಿ ಆಲೋಚನೆಗಳ ಮೂಲಕ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಎ.ದಯಾನಂದ, ಐಎಎಸ್ ಅವರ ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯವನ್ನು ಸಮನ್ವಯ ಟ್ರಸ್ಟ್ ನಿರ್ಮಾಣ ಮಾಡಿದೆ. ಸಮನ್ವಯ ಟ್ರಸ್ಟ್ ಸ್ವಯಂಸೇವಕರೇ ಕೈಜೋಡಿಸಿ ನಿರ್ಮಾಣ ಮಾಡಿರುವುದು ವಿಶೇಷ.

ಸಮನ್ವಯ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿರುವ ನೂತನ ಕಟ್ಟಡಕ್ಕೆ “ಕೆ.ಎ.ದಯಾನಂದ ಐಎಎಸ್, ರಾಜ್ಯದ ಮೊದಲ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ” ಎಂದು ಹೆಸರಿಡಲಾಗಿದೆ. ಅಲ್ಲಮ ಪ್ರಭು ಜ್ಞಾನ ಮಂದಿರ, ಅತಿಥಿಗೃಹ, ಕುವೆಂಪು ಅಂಗಳ ಹಾಗೂ ಸಮನ್ವಯ ಕಾರ್ಯಾಲಯ ಕೂಡ ಹೊಸ ಕಟ್ಟಡದಲ್ಲಿ ಇರಲಿದೆ.

ಸಮನ್ವಯ ಟ್ರಸ್ಟ್ ನೂತನ ಕಟ್ಟಡದ ಲೋಕಾರ್ಪಣೆಯು ನವೆಂಬರ್ 25ರ ಬೆಳಗ್ಗೆ 11.30ಕ್ಕೆ ನಡೆಯಲಿದ್ದು, ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು, ಗೋಣಿಬೀಡಿನ ಡಾ. ಸಿದ್ಧಲಿಂಗ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಮೂಲೆಗದ್ದೆ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ರಾಮಕೃಷ್ಣ ಆಶ್ರಮ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಅವರು ಕಟ್ಟಡದ ಲೋಕಾರ್ಪಣೆ ನಡೆಸಿಕೊಡಲಿದ್ದಾರೆ.

Samanvaya Trust ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಪಂಚಭಾಷಾ ನಟಿ ಪ್ರೇಮಾ, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉಪಸ್ಥಿತರಿರುವರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಉದ್ಯಮಿಗಳು ಭಾಗವಹಿಸುವರು.

ಮೊದಲ ವಿಶೇಷ ಕಾರ್ಯಕ್ರಮ: ಸಮನ್ವಯದ ನೂತನ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳ ಜತೆ ಸಂವಾದವು ನವೆಂಬರ್ 25ರ ಸಂಜೆ 5ಕ್ಕೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಐಎಎಸ್ ತರಬೇತುದಾರರಾದ ಆಯಿಷಾ ಪರ್ಝಾನ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಟ್ರಸ್ಟಿ ವಿಕ್ರಮ್.ಎ.ವಿ. ಉಪಸ್ಥಿತರಿರುವರು. ಸಂವಾದದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು 8792435402 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...