Wednesday, October 21, 2026
Wednesday, October 21, 2026

Kanakadasa Jayanthi  ನವೆಂಬರ್ 30 ರಂದು ಜಿಲ್ಲಾ ಆಡಳಿತದ ವತಿಯಿಂದ ಕನಕದಾಸ ಜಯಂತಿ

Date:

Kanakadasa Jayanthi  ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ, ಶಿವಮೊಗ್ಗ ಇವರುಗಳು ಸಂಯುಕ್ತಾಶ್ರಯದಲ್ಲಿ ನ.30 ರಂದು ಬೆಳಗ್ಗೆ 11ಕ್ಕೆ ನಗರದ ಕುವೆಂಪು ರಂಗಮoದಿರದಲ್ಲಿ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ನೆರವೇರಿಸಲಿದ್ದಾರೆ. ಶಾಸಕರ ಎಸ್.ಎನ್. ಚನ್ನಬಸಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಖೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಮತ್ತು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರು, ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಗಳು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗು ಸದಸ್ಯರುಗಳು ಭಾಗವಹಿಸಲಿದ್ದಾರೆ.

Kanakadasa Jayanthi  ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಇವರುಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...